ನವದೆಹಲಿ : ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಹೋದರ ಡಿ.ಕೆ.ಸುರೇಶ್ ಅವರು ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ಇಡಿ ವಿಚಾರಣೆಗೆ ಸಂಬಂದಿಸಿದಂತೆ ಅಧಿಕಾರಿಗಳು ನಮ್ಮ ಮೇಲಿದ್ದ ಪ್ರಕರಣಗಳ ಜತೆಗೆ ಬೇರೆ ಪ್ರಕರಣಗಳ ವಿಚಾರವಾಗಿಯೂ ಸಮನ್ಸ್ ನೀಡಿದ್ದು, ಈ ಯಾತ್ರೆ ಮುಗಿದ ನಂತರ ವಿಚಾರಣೆಗೆ ಹಾಜರಾಗುವುದಾಗಿ ನಾವು ಕಾಲಾವಕಾಶ ಕೋರಿದ್ದೆವು. ಆದರೆ ಇಂದು ಮತ್ತೆ ಇಡಿ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದು,. ನಾವು ಕಾನೂನು ರೂಪಿಸುವವರಾಗಿದ್ದು, ನಾವು ಕಾನೂನಿಗೆ ಗೌರವ ನೀಡಬೇಕಿದೆ. ಈ ಯಾತ್ರೆಯನ್ನು ಜನರು ನಡೆಸುತ್ತಾರೆ ಎಂದು ಪಕ್ಷ ಆದೇಶ ನೀಡಿದ್ದು, ನಾನು ಹಾಗೂ ನನ್ನ ಸಹೋದರ ಇಂದು ದೆಹಲಿಗೆ ತೆರಳಿ ವಿಚಾರಣೆಗೆ ಹಾಜರಾಗುತ್ತೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದರು.
ಸೆಪ್ಟೆಂಬರ್ 23ಕ್ಕೆ ಇಡಿ ವಿಚಾರಣೆ ಬರುವಂತೆ ಸಮನ್ಸ್ ನೀಡಿತ್ತು. ಆದರೆ ನಾವು ಭಾರತ್ ಜೋಡೋ ಯಾತ್ರೆಯಲ್ಲಿ ಇದ್ದೆವು. ಹೀಗಾಗಿ ಸಮಯಾವಕಾಶ ಕೇಳಿದ್ದೆವು. ಆದರೆ ಅಧಿಕಾರಿಗಳು ನಿರಾಕರಿಸಿದ ಹಿನ್ನೆಲೆ ನಾನು ವಿಚಾರಣೆಗೆ ಬಂದಿದ್ದೇನೆ. ನಾವು ಕಾನೂನಿಗೆ ಗೌರವ ಕೊಡಬೇಕು ಎಂದು ನಾನು ಮತ್ತು ನನ್ನ ಸಹೋದರ ಡಿ.ಕೆ.ಸುರೇಶ್ ದೆಹಲಿಗೆ ಬಂದಿದ್ದೇವೆ ಎಂದರು.