ಬೆಂಗಳೂರು : ಮೀಸಲಾತಿ ವಿಚಾರದಲ್ಲಿ ಡಿ.ಕೆ ಶಿವಕುಮಾರ್ ಗೆ ಮಾತನಾಡುವ ನೈತಿಕತೆ ಇಲ್ಲ. ಐವತ್ತು ವರ್ಷಗಳಿಂದ ಕಾಂಗ್ರೆಸ್ ಜನರಿಗೆ ಮೋಸ ಮಾಡುತ್ತಾ ಬಂದಿದೆ ಎಂದು ಸಚಿವ ಶ್ರೀರಾಮುಲು ವಾಗ್ಧಾಳಿ ನಡೆಸಿದರು.
ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಮ್ಮ ಕಾರ್ಯಕರ್ತರು ಒಗ್ಗಟ್ಟಾಗಿದ್ದಾರೆ, ನಮ್ಮ ಪಕ್ಞದ ಮೇಲೆ ಜೆಡಿಎಸ್ ಸೇರಿದಂತೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಕಾಂಗ್ರೆಸ್ ಮೀಸಲಾತಿ ವಿಚಾರದಲ್ಲಿ ಯಾರಿಗೂ ನ್ಯಾಯ ನೀಡಿಲ್ಲ, ಮೀಸಲಾತಿ ವಿಚಾರದಲ್ಲಿ ಡಿ.ಕೆ ಶಿವಕುಮಾರ್ ಗೆ ಮಾತನಾಡುವ ನೈತಿಕತೆ ಇಲ್ಲ. ಐವತ್ತು ವರ್ಷಗಳಿಂದ ಕಾಂಗ್ರೆಸ್ ಜನರಿಗೆ ಮೋಸ ಮಾಡುತ್ತಾ ಬಂದಿದೆ ಎಂದು ಸಚಿವ ಶ್ರೀರಾಮುಲು ವಾಗ್ಧಾಳಿ ನಡೆಸಿದರು.