ಕಲಬುರಗಿ : ಜಿಲ್ಲಾಡಳಿತ ನೀಡಿದ್ದ ಭೂಮಿ ದುರ್ಬಳಕೆ ಮಾಡಿಕೊಂಡ ಆರೋಪ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಪುತ್ರ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ದಾಖಲಾಗಿದೆ.
ಜಿಲ್ಲಾಡಳಿತ ನೀಡಿದ್ದ ಭೂಮಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ವಿರುದ್ಧ ಕಲಬುರಗಿ ಲೋಕಾಯುಕ್ತರಿಗೆ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರು ದೂರು ನೀಡಿದ್ದರು. ದೂರಿನ್ವಯ ಇಬ್ಬರು ನಾಯಕರ ಮೇಲೆ ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಾಗಿದೆ.
ಅಂಬೇಡ್ಕರ್ ಸ್ಮಾರಕ ಸಮೀತಿಗೆ ಕಲ್ಯಾಣ ಮಂಟಪ ನಿರ್ಮಾಣಕ್ಕಾಗಿ 1981ರಲ್ಲಿ ಕಲಬುರಗಿ ಜಿಲ್ಲಾಡಳಿತವು 36 ಸಾವಿರ ಚದರ್ ಅಡಿ ಭೂಮಿ ನೀಡಿತ್ತು. ಆದರೆ ಕಳೆದ ಕೆಲ ವರ್ಷಗಳಿಂದ ಕಲ್ಯಾಣ ಮಂಟಪ ಸಾರ್ವಜನಿಕ ಬಳಕೆಗೆ ನೀಡದೆ ಅಲ್ಲಿ ಕರ್ನಾಟಕ ಪಿಪಲ್ಸ್ ಎಜುಕೇಶನ್ ಸೊಸೈಟಿ ಕಚೇರಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಮನೆ ಕಟ್ಟುತ್ತಿರೋರಿಗೆ ಬಿಗ್ ಶಾಕ್: ಇಂದಿನಿಂದ ಕಟ್ಟಡ ಕಲ್ಲು, ಎಂ-ಸ್ಯಾಂಡ್ ಉತ್ಪಾದನೆ ಹಾಗೂ ಸಾಗಾಣೆ ಸ್ಥಗಿತ