ರಾಯಚೂರು: ಹಿಂದುಳಿದ ವರ್ಗ, ಬಡವರು, ಅಲ್ಪಸಂಖ್ಯಾತರ ಬಗ್ಗೆ ಸರ್ಕಾರಕ್ಕೆ ಕಾಳಜಿಯಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ.
ರಾಯಚೂರಿನ ಗಿಲ್ಲೆಸುಗೂರಿನಲ್ಲಿ ಮಾಧ್ಯಮದವರೊಂದಿಗೆ ಮಾತಮಾಡಿದ ಅವರು ಜನ ಬಿಜೆಪಿ ಸರ್ಕಾರವನ್ನು ಕಿತ್ತುಹಾಕಬೇಕು ಎನ್ನುವಾಗ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ಮುಂದಾಗಿದ್ದಾರೆ, ಈಗಲೂ ಹಾವು ಸಾಯಬಾರದು ಕೋಲು ಮುರಿಬಾರದು ಎಂಬುವಂತಹ ಪ್ರಯತ್ನ ಮಾಡಿದ್ದಾರೆ ಎಂದು ವಾಗ್ಧಾಳಿ ನಡೆಸಿದ್ದಾರೆ.
ಹಿಂದುಳಿದ ವರ್ಗ, ಬಡವರು, ಅಲ್ಪಸಂಖ್ಯಾತರ ಬಗ್ಗೆ ಸರ್ಕಾರಕ್ಕೆ ಕಾಳಜಿಯಿಲ್ಲ. ಮೊದಲು ನುಡಿದಂತೆ ನೀವು ನಡೆಯಬೇಕು, ಇಲ್ಲದಿದ್ದರೆ ಕಾಂಗ್ರೆಸ್ ತನ್ನ ನಿರ್ಧಾರ ಏನು ಅಂತ ಹೇಳುತ್ತದೆ ಅಂತ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಅಂತ ಹೇಳಿಕೊಳ್ಳುತ್ತದೆ, ಆದರೆ ಎರಡು ಇಂಜಿನ್ಗಳು ಒಟ್ಟಿಗೆ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
‘ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ’ : ಸಿದ್ದರಾಮಯ್ಯ ವಾಗ್ಧಾಳಿ