ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಇಡಿ ದಾಖಲಿಸಿದ್ದಂತ ಪ್ರಕರಣ ಸಂಬಂಧ, ಇಂದು ಡಿಕೆ ಬ್ರದರ್ಸ್ ಗೆ ( DK Brothers ) ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿಗೊಳಿಸಿತ್ತು. ಆದ್ರೇ ಪೂರ್ವ ನಿಗಧಿತ ಕಾರ್ಯಕ್ರಮದ ಕಾರಣ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( KPCC President DK Shivakumar ) ಇಂದಿನ ವಿಚಾರಣೆಗೆ ಗೈರು ಹಾಜರಾಗಲಿದ್ದಾರೆ ಎನ್ನಲಾಗುತ್ತಿದೆ. ಆದರೇ ಸಂಸದ ಡಿ.ಕೆ ಸುರೇಶ್ ( MP DK Suresh ) ಇಂದಿನ ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿ.ಕೆ ಸುರೇಶ್ ಅವರಿಗೆ ಇಂದು ಇಡಿ ಮುಂದೆ ಅಕ್ರಮ ಹಣವರ್ಗಾವಣೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಡಿಕೆ ಬ್ರದರ್ಸ್ ದೆಹಲಿಯ ಇಡಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೇ ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಹುಟ್ಟು ಹಬ್ಬದ ಪೂರ್ವ ನಿಯೋಜಿತ ಕಾರ್ಯಕ್ರಮ ಇರೋದ್ರಿಂದ ಡಿಕೆಶಿ ವಿಚಾರಣೆಗೆ ಗೈರು ಹಾಜರಾಗಲಿದ್ದಾರೆ ಎನ್ನಲಾಗುತ್ತಿದೆ.
BIGG NEWS : ರಾಜ್ಯದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಶೀಘ್ರವೇ `ಡೀಸೆಲ್ ಸಬ್ಸಿಡಿ’ ಖಾತೆಗೆ ಜಮಾ
ಇಂದಿನ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಮತ್ತೊಂದು ದಿನಾಂಕವನ್ನು ನಿಗದಿ ಪಡಿಸಿ ನೀಡುವಂತೆ ಇಡಿ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಇ-ಮೇಲ್ ಮೂಲಕ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಂಸದ ಡಿಕೆ ಸುರೇಶ್ ಅವರು ಮಾತ್ರವೇ ಇಂದು ಬೆಳಿಗ್ಗೆ 11 ಗಂಟೆಗೆ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಡಿಕೆ ಶಿವಕುಮಾರ್ ಇಂದು ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಆಯೋಜಿಸಲಾಗಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಹುಟ್ಟು ಹಬ್ಬದಲ್ಲಿ ಭಾಗಿಯಾಗಲಿದ್ದಾರೆ.