ಬೆಂಗಳೂರು : ನಿನ್ನೆ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಗಾಂಧಿ ಭಾರತ ಸಮಾವೇಶ ಆಯೋಜನೆ ಮಾಡಿತ್ತು. ಈ ಒಂದು ಸಮಾವೇಶದಲ್ಲಿ ಹಾವೇರಿ ಜಿಲ್ಲೆಯಿಂದ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನಪ್ಪಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಹೌದು ನಿನ್ನೆ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಗಾಂಧಿ ಭಾರತ್ ಸಮಾವೇಶ ನಡೆದಿತ್ತು. ಈ ವೇಳೆ ಧೀಡಿರ್ ಕುಸಿದು ಬಿದ್ದಿದ್ದ ಬಸಪ್ಪನನ್ನು ಜನರು ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಸಪ್ಪ ಪಾಮನಹಳ್ಳಿ ಮೃತಪಟ್ಟಿದ್ದರು ಮೃತ ಬಸಪ್ಪ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನದಿಹರಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ. ಇದೀಗ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ 5ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.