ಕಲಬುರಗಿ : ಮುಖ್ಯಮಂತ್ರಿ ಸ್ಥಾನದಿಮದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಸ್ವತಃ ಡಿ.ಕೆ.ಶಿವಕುಮಾರ್ ಅವರು ಸಂಚು ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ, ಲೋಕಸಭೆ ಚುನಾವಣೆ ಬಳಿಕ ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಅಜೆಂಡಾ ರೆಡಿ ಆಗಿದೆ. ಡಿ.ಕೆ.ಶಿವಕುಮಾರ್ ಹಾಗೂ ಶಿವಾನಂದ ಪಾಟೀಲ್ ಇಬ್ಬರೂ ಸೇರಿ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಶಿವನಾಂದ ಪಾಟೀಲ್, ಡಿ.ಕೆ.ಶಿವಕುಮಾರ್ ಹಾಗೂ ಸ್ವಾಮೀಜಿಯೊಬ್ಬರು ಸೇರಿ ಕಾನ್ಫರೆನ್ಸ್ ಕಾಲ್ ನಲ್ಲಿ ನಾವು ಒಕ್ಕಲಿಗರು ಒಂದಾಗಿ ಸಿದ್ದರಾಮಯ್ಯರನ್ನು ಕೆಳಗಿಳಿಸುತ್ತೇವೆ. ನೀವು ನಮಗೆ ಬೆಂಬಲ ನೀಡಬೇಕು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜೊತೆಗೆ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.