ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ಡಿ.ಕೆ ಶಿವಕುಮಾರ್ ಗೆ ತುರ್ತು ನೋಟಿಸ್ ಜಾರಿಗೊಳಿಸಿತ್ತು. ಆದ್ರೇ ಇಂದು ಯತ್ನಾಳ್ ಸಲ್ಲಿಸಿದ್ದಂತ ಅರ್ಜಿ ವರ್ಗಾವಣೆಗೆ ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ.
ಡಿ.ಕೆ ಶಿವಕುಮಾರ್ ಸಲ್ಲಿಸಿದ್ದಂತ ಮಾನನಷ್ಟ ಮೊಕದ್ದಮ್ಮೆಯನ್ನು ಕನಕಪುರ ನ್ಯಾಯಾಲಯದಿಂದ ಬೆಂಗಳೂರಿಗೆ ವರ್ಗಾವಣೆ ಮಾಡಿಕೊಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೋರ್ಟ್ ಮೊರೆ ಹೋಗಿದ್ದರು. ಅದರಲ್ಲಿ ಡಿಕೆ ಶಿವಕುಮಾರ್ ಬಲಾಢ್ಯರಾಗಿದ್ದಾರೆ. ನಾನು ಕನಕಪುರಕ್ಕೆ ಹೋಗಲು ತೊಂದರೆ ಮಾಡ್ತಾರೆ. ಹೀಗಾಗಿ ಬೆಂಗಳೂರಿನ ಕೋರ್ಟ್ ಗೆ ವರ್ಗಾವಣೆ ಮಾಡುವಂತೆ ಅರ್ಜಿಯಲ್ಲಿ ಹೈಕೋರ್ಟ್ ನ್ಯಾಯಾಪೀಠವನ್ನು ಮನವಿ ಮಾಡಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಡಿ.ಕೆ ಶಿವಕುಮಾರ್ ಸಲ್ಲಿಸಿದ್ದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಮಾನನಷ್ಟ ಪ್ರಕರಣ ಕುರಿತಂತೆ ಡಿಕೆ ಶಿವಕುಮಾರ್ ಗೆ ತುರ್ತು ನೋಟಿಸ್ ಜಾರಿಗೊಳಿಸಿತ್ತು.
ಇಂದು ಡಿ ಕೆ ಶಿವಕುಮಾರ್ ತಮ್ಮ ವಿರುದ್ಧ ಕನಕಪುರ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಹೂಡಿರುವ ಮಾನನಷ್ಟ ಮೊಕದ್ದಮೆಯನ್ನು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾಯಿಸಬೇಕೆಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಅರ್ಜಿಯನ್ನು ಹೈಕೋರ್ಟ್ ತಳ್ಳಿಹಾಕಿದೆ. ಈ ಮೂಲಕ ಶಾಸಕ ಬಸನವಗೌಡ ಯತ್ನಾಳ್ ಗೆ ಶಾಕ್ ನೀಡಲಾಗಿದೆ.
ಅಂದಹಾಗೇ ಬಿಜೆಳಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯಿಂದ ನನ್ನ ಘನತೆ ಮತ್ತು ವರ್ಚಸ್ಸಿಗೆ ಹಾನಿಯಾಗಿದ್ದು, 204 ಕೋಟಿ ಪರಿಹಾರ ನೀಡುವಂತೆ ಆದೇಶಿಸಬೇಕು ಎಂದು ಕೋರಿ ಶಿವಕುಮಾರ್, ರಾಮನಗರ ಜಿಲ್ಲೆಯ ಕನಕಪುರ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ಪ್ರಕರಣವನ್ನು ಬೆಂಗಳೂರಿಗೆ ವರ್ಗಾಯಿಸುವಂತೆ ಯತ್ನಾಳ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವರ್ಗಾವಣೆಗೆ ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ.
ಸೋಲಿನ ಹತಾಶೆಯಿಂದ ಕಾಂಗ್ರೆಸ್ ನಾಯಕರಿಂದ ಅವಹೇಳನಕಾರಿ ಮಾತು – ಆರ್.ಅಶೋಕ್
BIG NEWS: ‘ಸಭಾಪತಿ ಕಚೇರಿ’ಯಲ್ಲಿ ‘ಕಾಂಗ್ರೆಸ್ MLC’ಗಳ ಹೈಡ್ರಾಮಾ: ‘ರಾಜೀನಾಮೆ ಪತ್ರ’ ತೋರಿಸಿ ಕೊಡದೇ ಪ್ರಹಸನ