ಬೆಂಗಳೂರು : ಮಠ ಚಲನಚಿತ್ರದ ಖ್ಯಾತ ನಿರ್ದೇಶಕ ಹಾಗೂ ನಟ ಆಗಿದ್ದ ಗುರುಪ್ರಸಾದ್ ಅವರು ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ ಮಾದನಾಯಕನಹಳ್ಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಒಂದು ನಿಧನಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವು ಉಂಟಾಗಿದೆ. ಸೃಜನಶೀಲ ನಿರ್ದೇಶಕರು ಹಾಗೂ ಕನಕಪುರ ಮೂಲದವರೇ ಆದ ಶ್ರೀ ಗುರುಪ್ರಸಾದ್ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಗಿದೆ. ಬೆಳ್ಳಿತೆರೆ ಹಾಗೂ ಕಿರುತೆರೆಗೆ ತಮ್ಮದೇ ಶೈಲಿಯ ಕೊಡುಗೆ ನೀಡಿದ ಗುರುಪ್ರಸಾದ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬದವರು ಹಾಗೂ ಆತ್ಮೀಯರ ನೋವಿನಲ್ಲಿ ನಾನೂ ಕೂಡ ಭಾಗಿ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಅಲ್ಲದೆ ಗುರುಪ್ರಸಾದ್ ನಿಂದಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕೂಡ ಸಂತಾಪ ಸೂಚಿಸಿದ್ದಾರೆ. ಪ್ರತಿಭಾವಂತ ನಿರ್ದೇಶಕನನ್ನು ಕಳೆದುಕೊಂಡಿದ್ದೇವೆ. ಒಬ್ಬ ಉತ್ತಮವಾದಂತಹ ತಾಂತ್ರಿಕ ತಜ್ಞರನ್ನು ಕನ್ನಡ ಚಿತ್ರರಂಗದಲ್ಲಿ ಕಳೆದುಕೊಂಡದ್ದು ಎಲ್ಲರಿಗೂ ನೋವುಂಟು ಮಾಡುವಂತದ್ದು. ಈ ರೀತಿಯ ಸಾವು ಯಾರು ನಿರೀಕ್ಷೆ ಮಾಡಿರಲಿಲ್ಲ.
ದೇವರು ಅವರ ಆತ್ಮಕ್ಕೆ ಶಾಂತಿ ಕೊಡಲಿ. ಇತ್ತೀಚಿಗೆ ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕ ಮತ್ತು ನಿರ್ದೇಶಕರು ಪರಭಾಷೆಯ ಡಬ್ಬಿಂಗ್ ಹೊಡೆತದಲ್ಲಿ ಕನ್ನಡ ಚಿತ್ರರಂಗ ದಿನೇ ದಿನೇ ಸೊರಗುತ್ತಿದೆ. ಎಂತಹ ಪರಿಸ್ಥಿತಿಯಲ್ಲಿ ಆರ್ಥಿಕ ಸಂಕಷ್ಟಗಳಲ್ಲಿ ನಿರ್ದೇಶಕರು ಇರಬಹುದು, ನಟರು ಇರಬಹುದು, ಅಥವಾ ನಿರ್ಮಾಪಕರು ಇರಬಹುದು ಇಂತಹ ಘಟನೆಗಳಿಂದ ಸಾವುಗಳಾಗುತ್ತಿರುವುದು ಯಾವುದೇ ಕಾರಣಕ್ಕೂ ಒಳ್ಳೆಯ ಬೆಳವಣಿಗೆ ಅಲ್ಲ.
ಹಾಗಾಗಿ ಎಲ್ಲ ಕಲಾವಿದರಲ್ಲಿ ನಾನು ಮನವಿ ಮಾಡಿಕೊಳ್ಳೋದು ಇಷ್ಟೇ ಯಾವುದೇ ಸಂಕಷ್ಟದ ಸಂದರ್ಭವನ್ನು ಧೈರ್ಯದಿಂದ ಎದುರಿಸಬೇಕು. ನಿಜಕ್ಕೂ ಅವರ ಒಂದು ಸಾವು ನಮ್ಮೆಲ್ಲರಿಗೆ ನಷ್ಟ ಉಂಟು ಮಾಡಿದೆ. ಅವರ ಕುಟುಂಬಕ್ಕೆ ಸಾವಿನ ನೋವು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
ಸೃಜನಶೀಲ ನಿರ್ದೇಶಕರು ಹಾಗೂ ಕನಕಪುರ ಮೂಲದವರೇ ಆದ ಶ್ರೀ ಗುರುಪ್ರಸಾದ್ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಗಿದೆ. ಬೆಳ್ಳಿತೆರೆ ಹಾಗೂ ಕಿರುತೆರೆಗೆ ತಮ್ಮದೇ ಶೈಲಿಯ ಕೊಡುಗೆ ನೀಡಿದ ಗುರುಪ್ರಸಾದ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬದವರು ಹಾಗೂ ಆತ್ಮೀಯರ ನೋವಿನಲ್ಲಿ ನಾನೂ ಕೂಡ ಭಾಗಿ.… pic.twitter.com/dd37rmz79m
— DK Shivakumar (@DKShivakumar) November 3, 2024