ಬೆಂಗಳೂರು : ಕೋಮು ಗಲಭೆಯಲ್ಲೇ ಬಿಜೆಪಿಗರು ಕಾಲ ಕಳೆದಿದ್ದಾರೆ . ಕಾಂಗ್ರೆಸ್ ಜಾತಿ ಮೇಲಿಲ್ಲ. ನೀತಿ ಮೇಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ಮೂಡಿಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ ಇಂದಿರಾಗಾಂಧಿ, ರಾಜೀವ್ ಗಾಂಧಿ, ನೆಹರು, ಲಾಲ್ ಬಹದ್ದೂರು ಶಾಸ್ತ್ರಿ ಪ್ರಧಾನಿಯಾಗಿದ್ದಾಗ ಬಡವರಿಗೆ ನಿವೇಶನ, ಹುಕಂ ಸಾಗುವಳಿ ಸಕ್ರಮ, ಸಾಲ ಮನ್ನ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮ ಮಾಡಿದ್ದರು, ಆದರೆ ಜನರು ಪ್ರಯೋಜನ ಪಡೆದಿದ್ದಾರೆ ಎಂದರು.
ಬಿಜೆಪಿ ಒಂದೇ ಒಂದು ಕಾರ್ಯಕ್ರಮ ಬಿಜೆಪಿ ಮಾಡಲಿಲ್ಲ. ಕೇವಲ ಭಾವನೆಗಳು, ಕೋಮು ಗಲಭೆಯಲ್ಲೇ ಬಿಜೆಪಿಗರು ಕಾಲ ಕಳೆದಿದ್ದಾರೆ ಎಂದು ಟೀಕಿಸಿದರು.
ನಾನು ರೌಡಿ ಶೀಟರ್ ಅಲ್ಲ,
ನಾನು ರೌಡಿ ಶೀಟರ್ ಅಲ್ಲ, ನನ್ನ ಮೇಲೆ ಯಾವುದೇ ರೌಡಿ ಶೀಟರ್ ಕೇಸ್ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ತಿಹಾರ್ ಜೈಲಿನಿಂದ ಬಂದವರು ರಾಜ್ಯಾಧ್ಯಕ್ಷ ಹುದ್ದೆಗೆ ಬಡ್ತಿ ಹೊಂದಿದ್ದಾರೆ ಎಂಬ ಬಿಜೆಪಿ ಟ್ವೀಟ್ ಗೆ ಡಿಕೆಶಿ ತಿರುಗೇಟು ನೀಡಿದರು.ನನ್ನ ಮೇಲೆ ಯಾವುದೇ ರೌಡಿ ಶೀಟರ್ ಕೇಸ್ ಇಲ್ಲ, ಬಿ.ಎಸ್ ಯಡಿಯೂರಪ್ಪ ಕೂಡ ಜೈಲಿಗೆ ಹೋಗಿ ಬಂದಿದ್ದಾರೆ, ಅಂತೆಯೇ ನಾನು ಕೂಡ ಜೈಲಿಗೆ ಹೋಗಿದ್ದೇನೆ, ರಾಜಕೀಯ ಪ್ರೇರಿತವಾಗಿ ನನ್ನನ್ನು ಜೈಲಿಗೆ ಹಾಕಿದ್ದಾರೆ, ನಾನೇನು ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.
ಮೊದಲು ಬಿಜೆಪಿಯವರ ತಟ್ಟೆಯಲ್ಲಿ ದೊಡ್ಡ ಹೆಗ್ಗಣ ಬಿದ್ದಿದೆ, ಅದನ್ನು ಮೊದಲು ನೋಡಿಕೊಳ್ಳಲಿ, ಮತದಾನದ ಹಕ್ಕನ್ನೇ ಬಿಜೆಪಿಯವರು ಮಾರಲು ಹೊರಟಿದ್ದರು ಎಂದು ಕಿಡಿಕಾರಿದ್ದಾರೆ.