ಕೊಪ್ಪಳ : ಕೊಪ್ಪಳ ಜಿಲ್ಲೆ ಮುನಿರಾಬಾದ್ ಬಳಿ ಇರೋ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಡ್ಯಾಂಗೆ ಭೇಟಿ ನೀಡಿದ್ದು, ಡಿಸಿಎಂ, ಹಾಗೂ ಜಲ ಸಂಪನ್ಮೂಲ ಸಚಿವರಿಗೆ ರೈತರು, ನೀರಿನ ಬಗ್ಗೆ ಆಸಕ್ತಿ ಇಲ್ಲ ಕೇವಲ ಸಂಪನ್ಮೂಲದ ಬಗ್ಗೆ ಆಸಕ್ತಿ ಇದೆ ಎಂದು ವಾಗ್ದಾಳಿ ನಡೆಸಿದರು.
ಹೌದು ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದರಿಂದ ನೀರು ಪೋಲಾಗುತ್ತಿದೆ. ಇದರ ನಡುವೆ ಇಂದು ಕೂಡ ಜಲಾಶಯದಿಂದ ನದಿಗೆ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.ಈ ಸಂದರ್ಭದಲ್ಲಿ ಅಲ್ಲಿಗೆ ಭೇಟಿ ನೀಡಿದ ಅವರು, ಡಿಕೆ ಶಿವಕುಮಾರ್ ವಿರುದ್ಧ ಕಿಡಿ ಕಾರಿದರು.
ರಾಜ್ಯ ಸರ್ಕಾರದ ಹೊಣೆಗೇಡಿತನದಿಂದ ಈ ಘಟನೆ ಸಂಭವಿಸಿದೆ. ಪ್ರತಿ ಹೆಕ್ಟರ್ ಗೆ ತಲಾ 50,000 ನೀಡಬೇಕು. ತುಂಗಭದ್ರ ಡ್ಯಾಮ್ ಕಲ್ಯಾಣ ಕರ್ನಾಟಕ ಭಾಗದ ಜೀವನಾಡಿಯಾಗಿದೆ. ಈ ಡ್ಯಾಮಿನಿಂದ ನಾಲ್ಕು ಜಿಲ್ಲೆಗಳಲ್ಲಿ ಪತ್ರ ಬರೆಯಲು ಅನುಕೂಲವಾಗುತ್ತೆ. ಕಳೆದ ಬಾರಿ ಬರಗಾಲದಿಂದ ರೈತರು ಕಂಗಾಲಾಗಿದ್ದರು. ಈ ಬಾರಿ ಎರಡು ಬೆಳೆ ಬೆಳೆಯಬಹುದು ಅಂತ ರೈತರು ಸಂತಸದಿಂದ ಇದ್ದರು. ಡೇಟ್ ಕಳಚಿ ಬಿದ್ದಿದ್ದರಿಂದ ಈ ಭಾಗದ ರೈತರಿಗೆ ಆಘಾತ ಉಂಟಾಗಿದೆ.
ಅಧಿಕಾರಿಗಳು ಸರಿಯಾಗಿ ಕ್ರಮ ಕೈಗೊಳ್ಳಲಿರುವುದರಿಂದ ಈ ಸಮಸ್ಯೆ ಉಂಟಾಗಿದೆ. ಅಧಿಕಾರಿಗಳನ್ನು ಹೊಣೆ ಮಾಡಲ್ಲ ಅಂತ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ ಯಾರನ್ನು ಹೊಣೆ ಮಾಡುತ್ತೀರಿ ಎಂದು ಬಿ ವೈ ವಿಜಯೇಂದ್ರ ಪ್ರಶ್ನಿಸಿದರು. ಈ ಘಟನೆಯನ್ನು ರಾಜ್ಯ ಸರ್ಕಾರವೇ ಹೊರಬೇಕು. ಕಳೆದ ಒಂದು ವರ್ಷದಿಂದ ಚೀಫ್ ಇಂಜಿನಿಯರ್ ನೇಮಕವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದರು.