ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪ್ರಕರಣವನ್ನು ರದ್ದು ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ತಮ್ಮ ವಿರುದ್ಧ ಕೇಂದ್ರ ತನಿಖಾ ದಳ ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಡಿ.ಕೆ.ಶಿವಕುಮಾರ್ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣೆ ಸಲ್ಲಿಸಲು ಹೆಚ್ಚುವರಿ ಕಾಲಾವಕಾಶ ಬೇಕು ಎಂದು ಸಿಬಿಐ ಮನವಿ ಮಾಡಿದೆ.
ವಿಚಾರಣೆ ವೇಳೆ ತನಿಖೆ ಪೂರ್ಣಗೊಂಡು ಆರೋಪಪಟ್ಟಿ ದಾಖಲಿಸಲಾಗಿದೆಯೇ ಎಂದು ಸಿಬಿಐ ಪರ ವಕೀಲರನ್ನು ಹೈಕೋರ್ಟ್ ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಸಿಬಿಐ ಪರ ವಕೀಲರು, ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ನಡೆಯುತ್ತಿದೆ ಎಂದು ಹೇಳಿದೆ. ವಿಚಾರಣೆಯನ್ನು ದಸರಾ ರಜೆಯ ಬಳಿಕ ಮುಂದುವರಿಸಲಾಗುವುದು ಎಂದು ಹೈಕೋರ್ಟ್ ಹೇಳಿತು.