ಬೆಂಗಳೂರು: ಅಪಾರ್ಮೆಂಟ್ ನಿವಾಸಿಗಳಿಗೆ ಬೆದರಿಗೆ ಹಾಕಿ, ಮತದಾರರಿಗೆ ಆಮಿಷವೊಡ್ಡಿದ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಕುರಿತಂತೆ ಎಕ್ಸ್ ಮಾಡಿ ರಾಜ್ಯ ಚುನಾವಣಾ ಆಯೋಗವು ಎಕ್ಸ್ ಮಾಡಿ ಮಾಹಿತಿ ನೀಡಿ, ಅದರಲ್ಲಿ ಬೆಂಗಳೂರಿನ ಆರ್.ಆರ್.ನಗರದ ಅಪಾರ್ಟ್ಮೆಂಟ್ ಮಾಲೀಕರನ್ನುದ್ದೇಶಿಸಿ ಮಾತನಾಡುವಾಗ ಎಂಸಿಸಿ ಉಲ್ಲಂಘಿಸಿದ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬೆಂಗಳೂರಿನ ಎಫ್ಎಸ್ಟಿ ಎಫ್ಐಆರ್ ದಾಖಲಿಸಿದೆ. ಆರ್ ಎಂಸಿ ಯಾರ್ಡ್ ಪಿಎಸ್ ನಲ್ಲಿ ಎಫ್ ಐಆರ್ ಸಂಖ್ಯೆ 78/2024 ಅನ್ನು ಐಪಿಸಿಯ ಸೆಕ್ಷನ್ 171 (ಬಿ) (ಸಿ) (ಇ) (ಎಫ್) ಅಡಿಯಲ್ಲಿ ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬೀರಿದ್ದರ ಕಾರಣ, ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿತ್ತು.

ಈಗ ಯಶವಂತಪುರದ ಆರ್ ಎಂಸಿಯಾರ್ಡ್ ಪೊಲೀಸ್ ಠಾಣೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ದಾಖಲಾಗಿರುವಂತ ಎಫ್ಐಆರ್ ರದ್ದುಗೊಳಿಸುವಂತೆ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಯಾವ ತೀರ್ಪು ನೀಡುತ್ತೆ ಎಂಬುದನ್ನು ಕಾದು ನೋಡಬೇಕಿದೆ.

ಅಶ್ಲೀಲ ವಿಡಿಯೋ ವೈರಲ್ ಮಾಡಿದ ಗೆಳೆಯ : ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕಿ ಆತ್ಮಹತ್ಯೆ!

ಅಶ್ಲೀಲ ವಿಡಿಯೋ ವೈರಲ್ ಮಾಡಿದ ಗೆಳೆಯ : ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕಿ ಆತ್ಮಹತ್ಯೆ!

Share.
Exit mobile version