Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಲೋಕಸಭೆಯಲ್ಲಿ ಸ್ಪೀಕರ್ ವಿರುದ್ಧದ ‘ಅವಿಶ್ವಾಸ ನಿರ್ಣಯ’ ತಿರಸ್ಕಾರ ; ಸದನ ನಾಳೆಗೆ ಮುಂದೂಡಿಕೆ

11/03/2026 6:36 PM

BREAKING: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು: ಸ್ಪೀಕರ್ ಸ್ಥಾನದಲ್ಲಿ ಬಿರ್ಲಾ ಮುಂದುವರಿಕೆ

11/03/2026 6:34 PM

ಗೃಹಬಳಕೆ ಎಲ್‌ಪಿಜಿ ಪೂರೈಕೆಯಲ್ಲಿ ಆತಂಕ ಬೇಡ: ಮಿತವಾಗಿ ಬಳಸಲು ಸಚಿವ ಕೆ.ಎಚ್. ಮುನಿಯಪ್ಪ ಮನವಿ

11/03/2026 6:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮೇಕೆದಾಟು’ ಪಾದಯಾತ್ರೆ ವೇಳೆ ಇವರಿಬ್ಬರನ್ನು ಬಿಟ್ರೆ ಚಿತ್ರರಂಗದ ಉಳಿದವರ‍್ಯಾರು ಬೆಂಬಲಿಸಿಲ್ಲ : ಡಿಕೆ ಶಿವಕುಮಾರ್ ಅಸಮಾಧಾನ
KARNATAKA

‘ಮೇಕೆದಾಟು’ ಪಾದಯಾತ್ರೆ ವೇಳೆ ಇವರಿಬ್ಬರನ್ನು ಬಿಟ್ರೆ ಚಿತ್ರರಂಗದ ಉಳಿದವರ‍್ಯಾರು ಬೆಂಬಲಿಸಿಲ್ಲ : ಡಿಕೆ ಶಿವಕುಮಾರ್ ಅಸಮಾಧಾನ

By kannadanewsnow0502/03/2025 8:32 AM

ಬೆಂಗಳೂರು: “ನಾಡು, ನುಡಿ, ನೆಲ, ಜಲದ ಹೋರಾಟಕ್ಕೆ ಚಿತ್ರರಂಗದ ಸಹಕಾರ, ಬೆಂಬಲ, ಬದ್ಧತೆ ಇರಬೇಕು. ಆದರೆ ಮೇಕೆದಾಟು ಹೋರಾಟಕ್ಕೆ ಚಿತ್ರರಂಗದಿಂದ ಸರಿಯಾದ ಸಹಕಾರ ಸಿಗದೇ ಹೋದದ್ದರ ಬಗ್ಗೆ ನೋವು ಮತ್ತು ಸಿಟ್ಟು ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೇರವಾಗಿ ಹೇಳಿದರು.ವಿಧಾನಸೌಧದ ಮುಂಭಾಗದಲ್ಲಿ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಮಾತನಾಡಿದರು.

“ನನಗೆ ಸಿನಿಮಾರಂಗದವರ ಮೇಲೆ ಕೋಪ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿ, ನಟರ ಮೇಲೆ ಸಿಟ್ಟಿದೆ. ನಾವು ಕಷ್ಟ ಕಾಲದಲ್ಲಿ ಬೆಂಗಳೂರಿಗೆ ಕುಡಿಯುವ ನೀರು ದೊರಕಿಸಲು “ನಮ್ಮ ನೀರು, ನಮ್ಮ ಹಕ್ಕು ಎಂದು ಮೇಕೆದಾಟು ಪಾದಯಾತ್ರೆ ಮಾಡಿದೆವು. ಕೋವಿಡ್ ಸಮಯದಲ್ಲಿ ನಾನು, ಸಿದ್ದರಾಮಯ್ಯ ಅವರು ಸುಮಾರು 150 ಕಿ.ಮೀ ಪಾದಯಾತ್ರೆ ಮಾಡಿದೆವು. ನಾವು ನಮ್ಮ ಸ್ವಂತಕ್ಕಾಗಿ ಈ ಹೋರಾಟ ಮಾಡಲಿಲ್ಲ. ರಾಜ್ಯದ ಹಿತಕ್ಕಾಗಿ ನಡೆದೆವು. ಆದರೆ ಖುದ್ದು ಆಹ್ವಾನ ಕೊಟ್ಟರೂ ಒಂದಿಬ್ಬರನ್ನು ಹೊರತುಪಡಿಸಿ ಚಿತ್ರರಂಗದವರು ತಿರುಗಿ ನೋಡಲಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಅಸೋಸಿಯೇಷನ್ ನಿಂದ ಕೆಲವರು ಮಾತ್ರ ಬಂದಿದ್ದರು. ಕಲಾವಿದರ ಪೈಕಿ, ಸಾಧು ಕೋಕಿಲ ಹಾಗೂ ದುನಿಯಾ ವಿಜಿ ಅವರನ್ನು ಬಿಟ್ಟರೆ ಮತ್ಯಾರು ಭಾಗವಹಿಸಲಿಲ್ಲ. ಕೆಲವರು ನಟರನ್ನು ಬಳಸಿಕೊಂಡು ನಂತರ ಬಿಸಾಡುತ್ತಾರೆ. ನಾವು ಆ ರೀತಿ ಮಾಡುವುದಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಾಧು ಕೋಕಿಲ ಅವರನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ನಮ್ಮ ಕಷ್ಟ ಕಾಲದಲ್ಲಿ ಯಾರು ನಮಗೆ ಸಹಾಯ ಮಾಡುತ್ತಾರೋ ಅವರನ್ನು ಗುರುತಿಸಬೇಕು. ನಮಗೆ ಎಲ್ಲ ರಂಗದಲ್ಲಿಯೂ ಯಾರ್ಯಾರ ನಾಡಿ ಮಿಡಿತ ಏನಿದೆ ಎಂಬುದರ ಅರಿವಿದೆ. ಕಷ್ಟ ಕಾಲದಲ್ಲಿ ಆಗದಿದ್ದ ಮೇಲೆ ಏನು ಪ್ರಯೋಜನ” ಎಂದು ಪ್ರಶ್ನಿಸಿದರು.

ಚಿತ್ರರಂಗದ ಕಾರ್ಯಕ್ರಮ ನಮ್ಮದು ಎಂಬ ಭಾವನೆ ಎಲ್ಲರಲ್ಲೂ ಬರಬೇಕು

“ಈ ಕಾರ್ಯಕ್ರಮವು ಇಲ್ಲಿ ವೇದಿಕೆ ಮೇಲಿರುವ ಕೆಲವು ಕಲಾವಿದರು ಹಾಗೂ ರಾಜಕಾರಣಿಗಳ ಮನೆ ಕಾರ್ಯಕ್ರಮವಲ್ಲ. ಚಿತ್ರರಂಗದ ಕಾರ್ಯಕ್ರಮ. ಆದರೆ ಕೆಲವೇ ಕೆಲವು ಪ್ರಮುಖರು ಮಾತ್ರ ಇದ್ದಾರೆ. ಇದು ಕನ್ನಡ ಸಿನಿಮಾ ರಂಗದ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕೆ ನಟರು, ನಿರ್ಮಾಪಕರು, ನಿರ್ದೇಶಕರು, ಕಲಾವಿದರಲ್ಲದೆ ಮತ್ಯಾರು ಬರುತ್ತಾರೆ? ಶಿವರಾಜಕುಮಾರ್ ಅವರು ಇದನ್ನು ನಮ್ಮ ಮನೆಯ ಹಬ್ಬ ಎಂದು ಹೇಳಿದರು. ಆ ಭಾವನೆ ಚಿತ್ರರಂಗದ ಕಲಾವಿದರು, ನಿರ್ಮಾಪಕರು, ನಿರ್ದೇಶಕರು, ಪ್ರದರ್ಶಕರಿಗೆ ಇಲ್ಲವಾದರೆ, ನಿಮಗೇ ಆಸಕ್ತಿ ಇಲ್ಲವಾದರೆ ಈ ಚಲನಚಿತ್ರೋತ್ಸವವನ್ನು ಯಾಕೆ ಮಾಡಬೇಕು?” ಎಂದು ಕೇಳಿದರು.

“ಮುಂದಿನ ದಿನಗಳಲ್ಲಿಯಾದರೂ ಇಂತಹ ಕಾರ್ಯಕ್ರಮಗಳಿಗೆ ಚಿತ್ರರಂಗದ ಪ್ರಮುಖರು ಆಗಮಿಸಬೇಕು. ನಿಮ್ಮ ಕಾರ್ಯಕ್ರಮಕ್ಕೆ ನೀವೇ ಬರದಿದ್ದರೆ ಹೇಗೆ? ಇದನ್ನು ಎಚ್ಚರಿಕೆಯಂತಾದರೂ ಪರಿಗಣಿಸಿ ಅಥವಾ ಮನವಿ ಎಂದಾದರೂ ಪರಿಗಣಿಸಿ. ಈ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಿ. ಸರ್ಕಾರ ಅನುಮತಿ ನೀಡದೆ ಇದ್ದರೆ ಸಿನಿಮಾ ಚಿತ್ರೀಕರಣಕ್ಕೆ ಅವಕಾಶವೇ ಸಿಗುವುದಿಲ್ಲ. ಯಾರಿಗೆ ಹೇಗೆ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಎಂಬುದು ನಮಗೆ ಗೊತ್ತಿದೆ” ಎಂದು ತಿಳಿಸಿದರು.

ನನಗೂ ಚಿತ್ರರಂಗದ ನಂಟಿದೆ

“ಉತ್ತಮ ಸಾಹಿತ್ಯ, ಸಂಗೀತ, ಸಂಸ್ಕೃತಿಯೇ ನಮ್ಮ ದೇಶದ ಆಸ್ತಿ. ನಾನು ಚಿತ್ರ ಪ್ರದರ್ಶಕನಾಗಿದ್ದೆ. ಇಂದಿರಾ ಗಾಂಧಿ ಅವರ ಹೆಸರಲ್ಲಿ ಚಿತ್ರಮಂದಿರವನ್ನು ನಡೆಸಿದ್ದೆ. ಊರಲ್ಲಿ ನಾಲ್ಕು ಟೂರಿಂಗ್ ಟಾಕೀಸ್ ಇತ್ತು. ಈಗ ಅದು ನಿಲ್ಲಿಸಿದ್ದೇನೆ. ಇನ್ನು ನಮ್ಮ ಮಾಲ್ ಗಳಲ್ಲಿ 23 ತೆರೆಗಳ ಸಿನಿಮಾ ಕೇಂದ್ರಗಳಿವೆ. ಇವುಗಳಲ್ಲಿ ಒಂದರಲ್ಲೂ ಒಂದು ಸಿನಿಮಾ ನೋಡುವ ಸಮಯಾವಕಾಶ ಸಿಕ್ಕಿಲ್ಲ” ಎಂದರು.

“ನಾನು ಚಿತ್ರಮಂದಿರ ನಡೆಸುವಾಗ ಸಿನಿಮಾ ನೋಡಿಯೇ ಡಬ್ಬಾ ತೆಗೆದುಗೊಂದು ನಮ್ಮ ಊರಿನ ಚಿತ್ರ ಮಂದಿರದಲ್ಲಿ ಹಾಕುತ್ತಿದ್ದೆ. ಸತ್ಯ ಹರಿಶ್ಚಂದ್ರ ಸಿನಿಮಾವನ್ನು 15 ಬಾರಿ ನೋಡಿದ್ದೆ. ಮದುವೆಯಾದ ನಂತರ ನನ್ನ ಪತ್ನಿಯನ್ನು ಕರೆದುಕೊಂಡು ಈ ಸಿನಿಮಾ ತೋರಿಸಿದ್ದೆ” ಎಂದರು.

“ಬೇಕಾದಷ್ಟು ರಾಜಕಾರಣಿಗಳಿಗೂ ಚಿತ್ರರಂಗಕ್ಕೂ ನಂಟಿದೆ. ರಾಜಕಾರಣಿಗಳಲ್ಲಿ ಅನೇಕರು ತಮ್ಮ ಮಕ್ಕಳನ್ನು ಸಿನಿಮಾ ಮೂಲಕ ಜನರಿಗೆ ಪರಿಚಯಿಸಿ ರಾಜಕೀಯಕ್ಕೆ ಕರೆತರುವ ಪ್ರಯತ್ನ ಮಾಡಿದ್ದಾರೆ. ಕೆಲವರು ಯಶಸ್ವಿಯಾದರೆ, ಮತ್ತೆ ಕೆಲವರು ವಿಫಲವಾಗಿದ್ದಾರೆ. ನಮ್ಮ ರಾಜ್ಯದವರೇ ಆದ, ಜಯಲಲಿತಾ, ರಜನಿಕಾಂತ್ ಬೇರೆ ರಾಜ್ಯಗಳಲ್ಲಿ ಬೆಳೆದು ರಾಜ್ಯ ಹಾಗೂ ರಾಷ್ಟ್ರದ ನಾಯಕತ್ವ ವಹಿಸಿದ್ದಾರೆ. ಮುಖ್ಯಮಂತ್ರಿಗಳೂ ಆಗಿದ್ದಾರೆ” ಎಂದು ತಿಳಿಸಿದರು.

“ಕಲಾವಿದರು ಬಣ್ಣ ಹಚ್ಚಿ ನಟನೆ ಮಾಡಿದರೆ, ನಾವು ರಾಜಕಾರಣಿಗಳು ಬಣ್ಣ ಹಾಕಿಕೊಳ್ಳದೆ ನಿತ್ಯ ಸಿನಿಮಾ ಮಾಡುತ್ತಿದ್ದೇವೆ” ಎಂದು ಚಟಾಕಿ ಹಾರಿಸಿದರು.

ಬೆಂಗಳೂರಲ್ಲಿ ಐಫಾ ಆಯೋಜನೆಗೆ ಚರ್ಚೆ

“ಐಫಾ ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ನಡೆಸಲು ನಿನ್ನೆ ಒಂದು ತಂಡವೇ ಇಲ್ಲಿಗೆ ಆಗಮಿಸಿ ಸಭೆ ಮಾಡಲಾಗಿದೆ. ಮತ್ತೊಂದು ಸುತ್ತಿನ ಸಭೆ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡುತ್ತೇನೆ. ಕನ್ನಡ ಸಿನಿಮಾವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದೀರಿ. ಹೀಗಾಗಿ ನಿಮಗೆ ಅಭಿನಂದನೆ ಸಲ್ಲಿಸಬೇಕು. ನಿಮ್ಮ ಪರಿಶ್ರಮದಿಂದ ಎಲ್ಲಾ ಚಿತ್ರರಂಗ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಾಗಿದೆ”ಎಂದು ಹೇಳಿದರು.

“ಸಿನಿಮಾ, ನಿಮ್ಮ ಕಲೆ ಮೂಲಕ ಸರ್ಕಾರದ ಆಚಾರ ವಿಚಾರ ಪ್ರಚಾರ ಮಾಡುವುದು ನಿಮ್ಮ ಧರ್ಮ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಮ್ಮ ಮನೆಗಾಗಿ, ನಮ್ಮ ಪಕ್ಷದವರಿಗಾಗಿ ಮಾತ್ರ ಜಾರಿ ಮಾಡಿದ್ದೇವೆಯೇ? ಇದಕ್ಕಾಗಿ 56 ಸಾವಿರ ಕೋಟಿ ಹಣ ಪ್ರತಿ ವರ್ಷ …

Share. Facebook Twitter LinkedIn WhatsApp Email

Related Posts

ಗೃಹಬಳಕೆ ಎಲ್‌ಪಿಜಿ ಪೂರೈಕೆಯಲ್ಲಿ ಆತಂಕ ಬೇಡ: ಮಿತವಾಗಿ ಬಳಸಲು ಸಚಿವ ಕೆ.ಎಚ್. ಮುನಿಯಪ್ಪ ಮನವಿ

11/03/2026 6:33 PM2 Mins Read

BREAKING : 2026ರ ‘IPL’ ವೇಳಾಪಟ್ಟಿ ಪ್ರಕಟ : ಮಾ.28ಕ್ಕೆ ಬೆಂಗಳೂರಿನಲ್ಲೇ ಹೈದರಾಬಾದ್ ವಿರುದ್ಧ ‘RCB’ ಸೆಣಸಾಟ |IPL 2026 Schedule

11/03/2026 6:26 PM3 Mins Read

BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಕೋರ್ಟ್‌ನಿಂದ ಜಾಮೀನು ಮಂಜೂರು

11/03/2026 6:24 PM1 Min Read
Recent News

BREAKING : ಲೋಕಸಭೆಯಲ್ಲಿ ಸ್ಪೀಕರ್ ವಿರುದ್ಧದ ‘ಅವಿಶ್ವಾಸ ನಿರ್ಣಯ’ ತಿರಸ್ಕಾರ ; ಸದನ ನಾಳೆಗೆ ಮುಂದೂಡಿಕೆ

11/03/2026 6:36 PM

BREAKING: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು: ಸ್ಪೀಕರ್ ಸ್ಥಾನದಲ್ಲಿ ಬಿರ್ಲಾ ಮುಂದುವರಿಕೆ

11/03/2026 6:34 PM

ಗೃಹಬಳಕೆ ಎಲ್‌ಪಿಜಿ ಪೂರೈಕೆಯಲ್ಲಿ ಆತಂಕ ಬೇಡ: ಮಿತವಾಗಿ ಬಳಸಲು ಸಚಿವ ಕೆ.ಎಚ್. ಮುನಿಯಪ್ಪ ಮನವಿ

11/03/2026 6:33 PM

BREAKING : 2026ರ ‘IPL’ ವೇಳಾಪಟ್ಟಿ ಪ್ರಕಟ : ಮಾ.28ಕ್ಕೆ ಬೆಂಗಳೂರಿನಲ್ಲೇ ಹೈದರಾಬಾದ್ ವಿರುದ್ಧ ‘RCB’ ಸೆಣಸಾಟ |IPL 2026 Schedule

11/03/2026 6:26 PM
State News
KARNATAKA

ಗೃಹಬಳಕೆ ಎಲ್‌ಪಿಜಿ ಪೂರೈಕೆಯಲ್ಲಿ ಆತಂಕ ಬೇಡ: ಮಿತವಾಗಿ ಬಳಸಲು ಸಚಿವ ಕೆ.ಎಚ್. ಮುನಿಯಪ್ಪ ಮನವಿ

By kannadanewsnow0911/03/2026 6:33 PM KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಅಭಾವದ ಕುರಿತು ಕೇಳಿಬರುತ್ತಿರುವ ಸುದ್ದಿಗಳ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.…

BREAKING : 2026ರ ‘IPL’ ವೇಳಾಪಟ್ಟಿ ಪ್ರಕಟ : ಮಾ.28ಕ್ಕೆ ಬೆಂಗಳೂರಿನಲ್ಲೇ ಹೈದರಾಬಾದ್ ವಿರುದ್ಧ ‘RCB’ ಸೆಣಸಾಟ |IPL 2026 Schedule

11/03/2026 6:26 PM

BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಕೋರ್ಟ್‌ನಿಂದ ಜಾಮೀನು ಮಂಜೂರು

11/03/2026 6:24 PM

BREAKING : `IPL 2026’ ರ ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಹೈದರಾಬಾದ್ Vs RCB ಉದ್ಘಾಟನಾ ಪಂದ್ಯ !

11/03/2026 6:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.