ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ( ED Officer Raid ) ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ( CBI Raid ) ನಡೆಸಿದ್ದಾರೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ( KPCC President DK Shivakumar ) ಬಿಗ್ ಶಾಕ್ ನೀಡಿದ್ದಾರೆ.
ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಬುಧವಾರ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಸಿಬಿಐ ಅಧಿಕಾರಿಗಳು ಕನಕಪುರ ತಹಶೀಲ್ದಾರ್ ಹಾಗೂ ಪೋಲೀಸರ ಜತೆಗೆ ಡಿಕೆಶಿ ನಿವಾಸಕ್ಕೆ ದಾಳಿ ನಡೆಸಿದ್ದರು.
ಇನ್ನೂ, ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್ ‘ ಕನಕಪುರ , ದೊಡ್ಡ ಆಳಹಳ್ಳಿ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ನನ್ನ ಮೇಲೆ ಇರುವ ಪ್ರಕರಣಗಳನ್ನು ಸ್ಪೀಕರ್ ತನಿಖೆಗೆ ಕೊಟ್ಟಿದ್ದಾರೆ. ನಾನು ತನಿಖೆಗೆ ಸಹಕರಿಸುತ್ತೇನೆ ಸಮಯ ಕೊಡಿ ಎಂದಿದ್ದೇನೆ. ನನಗೆ ಮಾನಸಿಕವಾಗಿ ಹಿಂಸೆಯಾಗುತ್ತಿದೆ. ಸರ್ಕಾರ, ಲೋಕಾಯುಕ್ತ ಆಸ್ತಿ ಬಗ್ಗೆ ಪ್ರಶ್ನೆ ಮಾಡಿದ್ರೆ ಸರಿ, ಆದರೆ ಇಡಿ ಅಧಿಕಾರಿಗಳು ಮತ್ತೆ ವಿಚಾರಣೆಗೆ ಕರೆದಿದ್ದಾರೆ. ಕೇಂದ್ರ ನಮ್ಮನ್ನು ಬಹಳ ಪ್ರೀತಿ ಮಾಡುತ್ತಿದೆ’ ಎಂದು ವ್ಯಂಗ್ಯವಾಡಿದರು.
BIGG NEWS : ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡರಿಗೆ ಕೊಲೆ ಬೆದರಿಕೆ |T.D Rajegowda