ರಾಮನಗರ : ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ರಾಮನಗರ ತಾಲೂಕಿನ ಲಕ್ಷ್ಮಿಪುರದಲ್ಲಿ ಕಾಂಗ್ರೆಸ್ ಶಾಸಕ HC ಬಾಲಕೃಷ್ಣ ಹೇಳಿಕೆ ನೀಡಿದರು.
ರಾಮನಗರ ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವುದಕ್ಕೆ ನಮ್ಮ ನಾಯಕರು ಒಪ್ಪಿಕೊಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸೂಕ್ತ ವ್ಯಕ್ತಿಯನ್ನು ಗುರುತಿಸಿದರೆ ಸ್ವಾಗತ ಮಾಡುತ್ತೇವೆ.
ಯಾವುದೇ ಕಂಡೀಶನ್ ಹಾಕಿ ಅಧ್ಯಕ್ಷ ಸ್ಥಾನ ಬಿಡುತ್ತಾರೆ ಅನ್ನೋದು ಸುಳ್ಳು. ಹೈಕಮಾಂಡ್ ಅವರು ಹೇಳಿದರೆ ಬಿಟ್ಟು ಕೊಡೋಕೆ ಡಿಸಿಎಂ ಡಿಕೆ ಶಿವಕುಮಾರ್ ಸಿದ್ದರಿದ್ದಾರೆ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಶಾಸಕ ಎಚ್ ಸಿ ಬಾಲಕೃಷ್ಣ ಸುಳಿವು ನೀಡಿದ್ದಾರೆ.