ಬೆಂಗಳೂರು: ರಾಜ್ಯದ ಪಂಚಾಯ್ತಿ, ಸ್ಥಳೀಯ ಸಂಸ್ಥೆಗಳ ಚುನಾವಣೆ ವರೆಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸುಭದ್ರವೆಂಬುದಾಗಿ ತಿಳಿದು ಬಂದಿದೆ. ಅಕ್ಟೋಬರ್ ನಲ್ಲಿ ಇದು ಮುಗಿಯಲಿದ್ದು, ಆ ಬಳಿಕ ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಈ ಬಗ್ಗೆ ಸ್ವತಹ ಅವರೇ ಮುಳಿಸುವ ನೀಡಿದ್ದು, ರಾಜ್ಯದಲ್ಲಿ ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿಯುವವರೆಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಯಿಲ್ಲ. ಹೀಗಾಗಿ ಅಕ್ಟೋಬರ್ ತಿಂಗಳವರೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಸಾಧ್ಯತೆಯಿಲ್ಲ ಎಂಬುದಾಗಿ ಹೇಳಲಾಗುತ್ತಿದೆ.
ಶನಿವಾರದಂದು ಕೆಪಿಸಿಸಿ ಕಚೇರಿಯಲ್ಲಿ ನಡೆದಂತ ಪದಾಧಿಕಾರಿಗಳ ಸಭೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಕಾಂಗ್ರೆಸ್ 100 ಕಚೇರಿ ಸ್ಥಾಪನೆ ನೆರವೇರಿಸಲಿದೆ. ಕಾರ್ಯಕ್ರಮದ ಬಳಿಕ ನಾನು ದೊಡ್ಡ ಜವಾಬ್ದಾರಿಯಿಂದ ಮುಕ್ತವಾಗುತ್ತೇನೆ. ಬಳಿಕ ಯಾರಾದರೂ ಜವಾಬ್ದಾರಿ ತೆಗೆದುಕೊಳ್ಳಲಿ ಎಂಬುದಾಗಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಠಿಸಿದೆ. ಜೊತೆಗೆ ಅಕ್ಟೋಬರ್ ವರೆಗೆ ಮಾತ್ರವೇ ಅವರು ಕೆಪಿಸಿಸಿ ಅಧ್ಯಕ್ಷರ ಹುದ್ದೆಯಲ್ಲಿ ಮುಂದುವರೆಯುವಂತ ಗುಟ್ಟು ರಟ್ಟಾದಂತೆ ಆಗಿದೆ.
ವೃದ್ಧ ತಂದೆ-ತಾಯಿಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ್ರೆ ಆಸ್ತಿ, ಉಯಿಲು ರದ್ದು: ರಾಜ್ಯ ಸರ್ಕಾರ
BIG NEWS: `ಇ ಖಾತಾ’ ಇಲ್ಲದೆ ಆಸ್ತಿ ನೋಂದಣಿ ಇಲ್ಲ: ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ.!