ಬೆಂಗಳೂರು: ಕಾಂಗ್ರೆಸ್ ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವಂತ ಡಿ.ಕೆ ಶಿವಕುಮಾರ್ ಅವರು ಕರ್ನಾಟಕ ಮುಖ್ಯಮಂತ್ರಿಯಾಗಿ ಜೂನ್.3ರಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬುದಾಗಿ ಎಐಸಿಸಿ ವೀಕ್ಷಕರಾದಂತ ಕೆ.ಸಿ ವೇಣುಗೋಪಾಲ್ ಘೋಷಿಸಿದ್ದಾರೆ.
ಇಂದು ಸಿಎಲ್ ಪಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿದಂತ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಆ ಬಳಿಕ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ಮುಖ್ಯಮಂತ್ರಿ ಆಯ್ಕೆಗೆ ಸೂಚಿಸಲಾಗಿತ್ತು. ಅದರಂತೆ ಇಂದು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಸಿಎಲ್ ಪಿ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಅವರ ಆಯ್ಕೆಯನ್ನು ಸಿದ್ಧರಾಮಯ್ಯ ಅವರು ಪ್ರಸ್ತಾಪಿಸಿದರು. ಅದಕ್ಕೆ ಡಾ.ಜಿ ಪರಮೇಶ್ವರ್ ಅವರು ಅನುಮೋದನೆ ನೀಡಿದರು ಎಂದರು.
ಜೂನ್.3ರಂದು ಸಂಜೆ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರಿಸಲಿದ್ದಾರೆ. ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಆಹ್ವಾನಿಸಲಿದ್ದಾರೆ ಎಂಬುದಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಕೆ.ಸಿ ವೇಣುಗೋಪಲ್ ತಿಳಿಸಿದರು.
ಸಿಎಲ್ ಪಿ ನಾಯಕರಾಗಿ ಡಿ.ಕೆ ಶಿವಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇದೊಂದು ಹೆಮ್ಮೆಯ ಸಂಗತಿಯಾಗಿದೆ ಎಂಬುದಾಗಿ ಹೇಳಿದರು.
CUET (UG) 2026 ಪರೀಕ್ಷೆಯಲ್ಲಿ ತಾಂತ್ರಿಕ ದೋಷ: ಸಂತ್ರಸ್ತ ವಿದ್ಯಾರ್ಥಿಗಳಿಗೆ ಮರುಪರೀಕ್ಷೆಯ ಅವಕಾಶ ಪ್ರಕಟಿಸಿದ NTA
ನೆಚ್ಚಿನ ನಾಯಕನ ‘ಸಿಎಂ ಪಟ್ಟ’ಕ್ಕಾಗಿ 3 ವರ್ಷಗಳ ‘ತಪಸ್ಸು’: ಕೊನೆಗೂ ಫಲಿಸಿತು ‘ಡಿಕೆಶಿ ಅಭಿಮಾನಿ’ಯ ಸಂಕಲ್ಪ!








