ಬೆಂಗಳೂರು : ಇಂದು ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಅಮೆರಿಕಕ್ಕೆ ತೆರಳಿದ್ದಾರೆ. ಡಿಕೆ ಶಿವಕುಮಾರ್ ಗೆ ಅಮೆರಿಕಾದ ಉಪಾಧ್ಯಕ್ಷೆ ಕಮಲ ಹ್ಯಾರಿಸ್ ಆಹ್ವಾನ ನೀಡಿರುವ ಹಿನ್ನೆಲೆಯಲ್ಲಿ ತಮ್ಮ ಕುಟುಂಬದ ಸಮೇತ ಇಂದು ರಾತ್ರಿ ಡಿಕೆ ಶಿವಕುಮಾರ್ ಅಮೆರಿಕಕ್ಕೆ ತೆರಳಲಿದ್ದಾರೆ.
ಕಮಲ ಹ್ಯಾರಿಸ್, ಅಮೆರಿಕ ಅಧ್ಯಕ್ಷ ಚುನಾವಣೆಯ ಅಭ್ಯರ್ಥಿಯಾಗಿದ್ದಾರೆ. ನಾರ್ತ್ ಕ್ಯಾರೋಲಿನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಕಮಲಾ ಹ್ಯಾರಿಸ್ ತಾಯಿ ಶ್ಯಾಮಲಾ ಗೋಪಾಲನ್ ಟ್ರಸ್ಟಿಗೆ ಡಿಕೆ ಶಿವಕುಮಾರ್ ನೆರವು ನೀಡಲಿದ್ದು, ಟ್ರಸ್ಟ್ ಗೆ ಡಿಕೆಶಿ ಸಹಾಯ ಮಾಡಿದ್ದಾರೆ.
ಕಮಲಾ ತಾಯಿಯವರ ಟ್ರಸ್ಟ್ ಜೊತೆಗೆ ಡಿಕೆ ಶಿವಕುಮಾರ್ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಈ ಆಪ್ತತೆ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ ಕಮಲಾ ಹ್ಯಾರಿಸ್ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಕಮಲಾ ಹ್ಯಾರಿಸ್ ಆಯೋಜಿಸಿರುವ ಖಾಸಗಿ ಕಾರ್ಯಕ್ರಮದಲ್ಲಿ ಕೂಡ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ ಆಗಲಿದ್ದಾರೆ.
ಅಲ್ಲದೆ ಪ್ರಜಾಪ್ರಭುತ್ವ ಹಾಗೂ ಚುನಾವಣೆ ಸಂವಾದದಲ್ಲೂ ಡಿಕೆ ಭಾಗಿಯಾಗುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ. ಬಳಿಕ ಚಿಕ್ಯಗೋ ಗೆ ತೆರಳಲ್ಲಿರುವ ಡಿಕೆ ಶಿವಕುಮಾರ್ ಅಲ್ಲಿ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಓಬಾಮ ಅವರನ್ನು ಕೂಡ ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.