ಬೆಂಗಳೂರು : ರಾಜಕೀಯ ಕದನಗಳನ್ನು ರಾಜಕೀಯ ರಣರಂಗದಲ್ಲಿಯೇ ನಡೆಸಬೇಕು, ಸರ್ಕಾರಿ ಕಚೇರಿಗಳಲ್ಲಿ ಅಲ್ಲ ಎಂದು ಟ್ವೀಟ್ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ದೆಹಲಿಯಲ್ಲಿ ಇಡಿ ವಿಚಾರಣೆ ಎದುರಿಸಿದ ಬಳಿಕ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ”ರಾಜಕೀಯ ಕದನಗಳನ್ನು ರಾಜಕೀಯ ರಣರಂಗದಲ್ಲಿಯೇ ನಡೆಸಬೇಕು. BJP ತನ್ನ ರಾಜಕೀಯ ಎದುರಾಳಿಗಳಿಗೆ ಕಿರುಕುಳ ನೀಡಿ, ಬೆದರಿಸಲು ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ. ಇದಕ್ಕೆ ಮೇ 2023 ರಲ್ಲಿ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ ED ಮೂಲಕ ನಿರುದ್ಯೋಗ, ಬೆಲೆ ಏರಿಕೆಯನ್ನು ನಿಗ್ರಹಿಸಲು ಸಾಧ್ಯವಿಲ್ಲ ಎನ್ನುವುದು BJPಗೆ ಅರಿವಾಗಬೇಕಿದೆ” ಎಂದು ಟ್ವೀಟ್ ಮಾಡಿದ್ದಾರೆ.
ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಹೋದರ ಡಿ.ಕೆ.ಸುರೇಶ್ ಅವರು ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ದೆಹಲಿಯಲ್ಲಿ ಇಡಿ ವಿಚಾರಣೆ ಎದುರಿಸಿದ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್ ‘ಯಂಗ್ ಇಂಡಿಯಾ ಹಣಕಾಸು ವ್ಯವಹಾರದ ಬಗ್ಗೆ ಮಾಹಿತಿ ಕೇಳಿದ್ದರು. ಅದಕ್ಕೆ ಸರಿಯಾದ ಉತ್ತರ ನೀಡಿದ್ದೇನೆ. ನಮ್ಮ ಸಂಸ್ಥೆಗಳ ಕುರಿತು ದಾಖಲೆ ಪತ್ರ ಕೇಳಿದ್ದಾರೆ, ದಾಖಲೆಗಳನ್ನು ಶೀಘ್ರ ಸಲ್ಲಿಸಲಿದ್ದೇನೆ , ನ್ಯಾಷನಲ್ ಹೆರಾಲ್ಡ್ ಬಗ್ಗೆ ಏನೂ ಕೇಳಿಲ್ಲ, ರಾಜಕಾರಣವನ್ನು ರಾಜಕೀಯ ಮೈದಾನದಲ್ಲೇ ಮಾಡಬೇಕು, ಸರ್ಕಾರಿ ಕಚೇರಿಯಲ್ಲಿ ಮಾಡಬಾರದು’ ಎಂದು ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಸಹೋದರರ ವಿಚಾರಣೆ ಮುಕ್ತಾಯವಾಗಿದ್ದು, ಡಿಕೆ ಸಹೋದರರು ಸತತ 4 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದು, ಇಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದೆ. ನಂತರ ಡಿಕೆ ಸಹೋದರರು ಇಡಿ ಕಛೇರಿಯಿಂದ ತೆರಳಿದ್ದಾರೆ.
ರಾಜಕೀಯ ಕದನಗಳನ್ನು ರಾಜಕೀಯ ರಣರಂಗದಲ್ಲಿಯೇ ನಡೆಸಬೇಕು.
BJP ತನ್ನ ರಾಜಕೀಯ ಎದುರಾಳಿಗಳಿಗೆ ಕಿರುಕುಳ ನೀಡಿ, ಬೆದರಿಸಲು ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ. ಇದಕ್ಕೆ ಮೇ 2023 ರಲ್ಲಿ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ
ED ಮೂಲಕ ನಿರುದ್ಯೋಗ, ಬೆಲೆ ಏರಿಕೆಯನ್ನು ನಿಗ್ರಹಿಸಲು ಸಾಧ್ಯವಿಲ್ಲ ಎನ್ನುವುದು BJPಗೆ ಅರಿವಾಗಬೇಕಿದೆ.
— DK Shivakumar (@DKShivakumar) October 7, 2022
HEALTH TIPS: ಊಟದ ತಕ್ಷಣ ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ…!; ತಜ್ಞರ ಸಲಹೆಗಳೇನು?