ಬೆಂಗಳೂರು: ಎಲ್ಲಾ ಸಂಸ್ಥೆಗಳು ಕಡ್ಡಾಯವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಬೇಕು ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಹೀಗಾಗಿ ಯಾವುದೇ ಕನ್ನಡಪರ ಸಂಘಟನೆ ಅಥವಾ ಇತರರು ಯಾವುದೇ ಸಂಸ್ಥೆಗೆ ಆಚರಣೆ ಬಗ್ಗೆ ಬೆದರಿಕೆ ಹಾಕುವಂತಿಲ್ಲ. ತೊಂದರೆ ನೀಡುವಂತಿಲ್ಲ. ಒಂದು ವೇಳೆ ತೊಂದರೆ ನೀಡಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕನ್ನಡ ಪರ ಸಂಘಟನೆಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದರು.
ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದಂತ ಅವರು, “ಐಟಿ, ಬಿಟಿ ಹಾಗೂ ಕಾರ್ಖಾನೆಯವರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡದಿದ್ದರೂ, ಕನ್ನಡ ಬಾವುಟ ಹಾರಿಸಿ ರಾಜ್ಯೋತ್ಸವ ಆಚರಿಸಬೇಕು. ರಾಜ್ಯೋತ್ಸವ ಆಚರಣೆ ಮಾಡುವ ಸಂಸ್ಥೆಗಳು ಬಿಬಿಎಂಪಿಯಿಂದ ನೀಡುವ ದೂರವಾಣಿ ಸಂಖ್ಯೆಗೆ ವಾಟ್ಸಪ್ ಮೂಲಕ ಫೋಟೋಗಳನ್ನು ರವಾನಿಸಬೇಕು” ಎಂದು ತಿಳಿಸಿದರು.
“ಈ ಬಾರಿ ರಾಜ್ಯದೆಲ್ಲೆಡೆ 70ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಕನ್ನಡದ ನೆಲದಲ್ಲಿ ಕನ್ನಡ ಕಲಿಯಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯ. ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಈ ತೀರ್ಮಾನ ಪ್ರಕಟಿಸುತ್ತಿದ್ದೇನೆ” ಎಂದು ತಿಳಿಸಿದರು.
ನಿಮ್ಮ ನೇತೃತ್ವದಲ್ಲಿ ಕೊರೋನಾ ಹಗರಣ ತನಿಖೆಗೆ ಉಪ ಸಮಿತಿ ರಚನೆಯಾಗಿದ್ದು, ಯಾವಾಗಿನಿಂದ ತನಿಖೆ ಆರಂಭಿಸುತ್ತೀರಿ ಎಂದು ಕೇಳಿದಾಗ, “ಗುರುವಾರದಂದು ಈ ಬಗ್ಗೆ ತೀರ್ಮಾನವಾಗಿದೆ. ಮುಂದೆ ಈ ಬಗ್ಗೆ ಮಾಹಿತಿ ನೀಡುತ್ತೇನೆ” ಎಂದು ತಿಳಿಸಿದರು.
BREAKING : ಭಾರತದ ಮೊಟ್ಟ ಮೊದಲ ‘ಭಯೋತ್ಪಾದಕ’ ನಾಥೂರಾಮ್ ಗೋಡ್ಸೆ : MLC ಬಿಕೆ ಹರಿಪ್ರಸಾದ್ ಹೇಳಿಕೆ