ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆಗೆ ಡಿ.ಕೆ ಶಿವಕುಮಾರ್ ಮುಂದಾಗಿದ್ದರು: ಶಾಸಕ ಯತ್ನಾಳ್ ಹೊಸ ಬಾಂಬ್

ಕಲಬುರ್ಗಿ: ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ನಿಂದ ಒಂದು ಕಾಲು ಹೊರಗಿಟ್ಟಿದ್ದು, ಬಿಜೆಪಿ ಸಹಕಾರದೊಂದಿಗೆ ಸರ್ಕಾರ ರಚಿಸಲು ಮುಂದಾಗಿದ್ದರು ಎಂಬುದಾಗಿ ಶಾಸಕ ಬಸಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ರಹಸ್ಯ ಸಭೆಯನ್ನು ನಡೆಸಿದ್ದರು. ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆಗೆ ಮುಂದಾಗಿದ್ದರು ಎಂದರು. ಡಿ.ಕೆ ಶಿವಕುಮಾರ್, ವಿಜಯೇಂದ್ರ ಮಾತುಕತೆಯ ಸಂದರ್ಭದಲ್ಲಿ ಡಿಕೆಶಿ ಮುಖ್ಯಮಂತ್ರಿ, ವಿಜಯೇಂದ್ರ ಉಪಮುಖ್ಯಮಂತ್ರಿ ಆಗುವಂತೆ … Continue reading ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆಗೆ ಡಿ.ಕೆ ಶಿವಕುಮಾರ್ ಮುಂದಾಗಿದ್ದರು: ಶಾಸಕ ಯತ್ನಾಳ್ ಹೊಸ ಬಾಂಬ್