ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಇಂದು ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಅದೇ ಆಗಸ್ಟ್.12ರವರೆಗೆ ವಿಚಾರಣೆಯನ್ನು ಮುಂದೂಡಿದೆ.
ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದಂತ ಸಿಬಿಐ ತನಿಖೆಗೆ ಹಿಂಪಡೆ ಸರ್ಕಾರದ ಕ್ರಮವನ್ನು ಪ್ರಶ್ನಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು.
ಇಂದಿನ ಕೋರ್ಟ್ ಕಲಾಪಕ್ಕೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ತುರ್ತು ಕಾರಣಗಳಿಂದ ಹಾಜರಾಗಿರಲಿಲ್ಲ. ಈ ಬಗ್ಗೆ ಕೋರ್ಟ್ ಗಮನಕ್ಕೆ ರಾಜ್ಯ ಸರ್ಕಾರದ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಕೇಸ್ ಮುಂದೂಡುವನ್ನು ಮನವಿ ಮಾಡಿದರು. ಈ ಮನವಿಯನ್ನು ಪುರಸ್ಕರಿಸಿದಂತ ಹೈಕೋರ್ಟ್ ನ್ಯಾಯಪೀಠವು ಆಗಸ್.12ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್ ನೀಡಿದೆ.
BREAKING: ಮಂಗಳೂರಲ್ಲಿ ನಡು ರಸ್ತೆಯಲ್ಲೇ ‘ಕಾಲೇಜು ವಿದ್ಯಾರ್ಥಿ’ಗಳ ನಡುವೆ ಹೊಡೆದಾಟ