ಬೆಂಗಳೂರು: ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ ಪ್ರಕರಣದ ಬಗ್ಗೆ ಡಿ.ಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಹೇಳಿಕೆ ಶೋಭೆ ತರುವುದಿಲ್ಲ. ಅವರ ಹೇಳಿಕೆ ತೀವ್ರ ಖಂಡಿಸುತ್ತೇನೆ ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಸ್ಫೋಟ ಮಾಡಿಸುವ ಹುನ್ನಾರ ಬಯಲಾಗಿದೆ. ಈ ಹಿಂದೆ 2-3 ಕೇಸ್ ನಲ್ಲಿ ಈತ ಸಿಕ್ಕಿಹಾಕಿಕೊಂಡಿದ್ದಾನೆ. ದೇಶದ ಹೊರಗೆಯೂ ಶಂಕಿತ ಉಗ್ರನಿಗೆ ಸಂಪರ್ಕ ಇರುವ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಇದು ಚನಾವಣೆ ಓಲೈಕೆಯ ತಂತ್ರವಾಗಿದೆ. ಹೀಗೆ ಟೀಕೆ ಮಾಡಿದರೆ ಅಲ್ಪಸಂಖ್ಯಾತರ ಮತ ಬರುತ್ತೆ ಅಂತಾ ತಂತ್ರ ರೂಪಿಸಿದ್ದಾರೆ. ಕಾಂಗ್ರೆಸ್ಸಿಗರು ಉಗ್ರ ಪರ ಇದ್ದಾರೋ , ದೇಶದ ಪರ ಇದ್ದರೋ ಗೊತ್ತಿಲ್ಲ. ಈ ಬಗ್ಗೆ ರಾಹುಲ್ ಗಾಂಧಿ , ಸೋನಿಯಾ , ಮಲ್ಲಿಕಾರ್ಜುನ್ ಖರ್ಗೆ ಅವರು ಸ್ಪಷ್ಟನೆ ನೀಡಲಿ ಎಂದು ಸಿಎಂ ಹೇಳಿದ್ದಾರೆ. ಒಂದು ಸುಮುದಾಯದ ಓಲೈಕೆಗಾಗಿ ಡಿಕೆಶಿ ಹೇಳಿಕೆ ನೀಡಿದ್ದಾರೆ.ಹೀಗೆ ಮಾತನಾಡುವುದು ದೇಶ ಭಕ್ತನ ಕೆಲಸ ಅಲ್ಲ ಎಂದು ಡಿಕೆಶಿ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.