ಬೆಂಗಳೂರು : ಅಶ್ಲೀಲ ವಿಡಿಯೋ ಬಿಡುಗಡೆಯಲ್ಲಿ ಮಹಾ ನಾಯಕನ ಕೈವಾಡ ಇದೆ ಎಂದು ನೇರ ಹೆಸರು ಹೇಳದೆ ಡಿಕೆ ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಗುಡುಗಿದ್ದರು. ಇದೀಗ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಕುಮಾರಸ್ವಾಮಿ ವಿರುದ್ಧವೇ ಗಂಭೀರ ಆರೋಪ ಮಾಡಿದ್ದೂ, ವಿಡಿಯೋ ಬಿಡುಗಡೆ ಹಿಂದೆ ಮೈತ್ರಿ ನಾಯಕರು ಹಾಗೂ ಹೆಚ್​ಡಿ ಕುಮಾರಸ್ವಾಮಿ ಕೈವಾಡ ಇದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಬಳಿ ವಿಡಿಯೋ ಇದ್ದಿದ್ದರೆ ಮುಂಚೆಯೇ ಬಿಡುಗಡೆ ಮಾಡುತ್ತಿದ್ದರು. ಇದರ ಹಿಂದೆ ಹಾಸನ ನಾಯಕರ ಕೈವಾಡ ಇದೆ. ಕುಮಾರಸ್ವಾಮಿ ಕೈವಾಡ ಕೂಡ ಇದೆ ಎಂದು ಅವರು ಆರೋಪಿಸಿದರು.

ಹೆಣ್ಣು ಮಕ್ಕಳಿಗೆ ಅನ್ಯಾಯ ಆಗಿರುವ ಬಗ್ಗೆ ಗಮನ ಹರಿಸಬೇಕಿದೆ. ಈ ಕೇಸ್​ ಬಗ್ಗೆ ಹಾಸನ ಜಿಲ್ಲೆಯಲ್ಲಿ ಮೊದಲೇ ಗುಸುಗುಸು ಇತ್ತು. ಹಾಗೆಂದು ವೀಡಿಯೋ ನೋಡಿದವರು ಯಾರೂ ಇರಲಿಲ್ಲ. ನ್ಯಾಯಾಲಯದ ತಡೆಯಾಜ್ಞೆ ತಂದಾಗ ಅದು ಖಚಿತ​ ಆಗಿದೆ. ಪೆನ್​ಡ್ರೈವ್ ಬಿಡುಗಡೆಯಾದಾಗ ಬಹಿರಂಗವಾಗಿ ಚರ್ಚೆ ಆಗಿದೆ. ಈ ವಿಡಿಯೋ ಹಿಂದೆ ಹಾಸನ ಜಿಲ್ಲಾ ನಾಯಕರ ಕೈವಾಡ ಇದೆ ಎಂದರು.

ಡಿಸಿಎಂ ಡಿಕೆಶಿವಕುಮಾರ್ ಹೆಸರು ಹೇಳದಿದ್ದರೆ ಕುಮಾರಸ್ವಾಮಿ ಕುಟುಂಬಕ್ಕೆ ಊಟ ಸೇರುವುದಿಲ್ಲ. ಬಹಳ ದೊಡ್ಡ ಕುಟುಂಬ ಅಲ್ವಾ ಅವರದ್ದು. ಅವರವರ ಉಳಿವಿಗಾಗಿ ಡಿಕೆಶಿಯವರನ್ನು ಬಳಸಿಕೊಳ್ಳುತ್ತಿದ್ದಾರೆ. ಡಿಕೆಶಿಯನ್ನು ಅನಗತ್ಯವಾಗಿ ಎಳೆದು ತರುತ್ತಿದ್ದಾರೆ. ವೀಡಿಯೋ ಬಿಡುಗಡೆ ಹಿಂದೆ ಅವರ ಮೈತ್ರಿ ನಾಯಕರು ಹಾಗೂ ಕುಮಾರಸ್ವಾಮಿ ಕೈವಾಡ ಇದೆ ಎಂದು ಸುರೇಶ್ ಹೇಳಿದರು.

Share.
Exit mobile version