ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಯ ಇಡಿ ವಿಶೇಷ ಕೋರ್ಟ್ ಗೆ ಹಾಜರಾಗಿದ್ದಾರೆ.
ಡಿಕೆಶಿ ಮೇಲಿರುವ ಅಕ್ರಮ ಹಣ ವರ್ಗಾವಣೆ ಆರೋಪದ ಕುರಿತು ದೆಹಲಿಯ ವಿಶೇಷ ಇಡಿ ಕೋರ್ಟ್ ನಲ್ಲಿ ನ್ಯಾ,ವಿಕಾಸ್ ಧುಲ್ ಎದುರು ಡಿಕೆಶಿ ಹಾಜರಾಗಿದ್ದಾರೆ.
2019ರಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಐಟಿ ಅಧಿಕಾರಿಗಳು ಡಿ.ಕೆ.ಶಿ ಮನೆ ಮೇಲೆ ದಾಳಿ ಮಾಡಿದ್ದರು. ನಂತರ ಎರಡೂವರೆ ವರ್ಷದ ಬಳಿಕೆ ಆರೋಪ ಪಟ್ಟಿ ತಯಾರಿಸಿದ ಇಡಿ ಅಧಿಕಾರಿಗಳು ದೆಹಲಿಯ ವಿಶೇಷ ನ್ಯಾಯಾಲಯಗೆ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.
2019ರಲ್ಲಿ ಡಿಕೆಶಿ ಹಾಗೂ ಆಪ್ತರ ನಿವಾಸಗಳ ಮೇಲೆ ಐಟಿ ದಾಳಿ ನಡೆದಿತ್ತು. ದಾಳಿ ವೇಳೆ 8 ಕೋಟಿ ರೂಪಾಯಿ ನಗದು ಪತ್ತೆಯಾಗಿತ್ತು. ಬಳಿಕ ಡಿಕೆಶಿ ವಿರುದ್ಧ ಪ್ರಕರಣ ಇಡಿಗೆ ವರ್ಗಾವಣೆಗೊಂಡಿತ್ತು. ಇಡಿ ಅಧಿಕಾರಿಗಳು ಡಿಕೆಶಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.
ಇತ್ತೀಚೆಗೆ ಪ್ರಕರಣ ರದ್ದು ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ನೀಡಿತ್ತು, ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಮತ್ತು ನ್ಯಾ.ಅನೀಶ್ ದಯಾಳ್ ಪೀಠ ಪ್ರಕರಣ ಬಗ್ಗೆ ಉತ್ತರಿಸುವಂತೆ ನೋಟಿಸ್ ನಲ್ಲಿ ತಿಳಿಸಿತ್ತು.. ಪ್ರಕರಣದ ರದ್ದು ಕೋರಿರುವ ಡಿ.ಕೆ ಶಿವಕುಮಾರ್, ಅರ್ಜಿಯಲ್ಲಿ ಪಿಎಂಎಲ್ಎ ಸೆಕ್ಷನ್ 13 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದರು.
SHOCKING : ಮಂಗಳೂರು ಸ್ಪೋಟ ಪ್ರಕರಣ : ‘ವಿಡಿಯೋ’ ನೋಡಿ ಬಾಂಬ್ ತಯಾರಿಕೆ ಕಲಿತ ಆರೋಪಿ