ಬೆಂಗಳೂರು : ಮತದಾರರ ಮಾಹಿತಿ ಸಂಗ್ರಹ ಮಾಡುವುದು ಗಂಭೀರ ಆರೋಪವಾಗಿದೆ, ನಾಳೆ ನಾಳೆ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಲಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ ಮತದಾರರ ಪಟ್ಟಿಯ ಅಕ್ರಮ ಪರಿಷ್ಕರಣೆ, ಮತದಾರರ ಮಾಹಿತಿ ಸಂಗ್ರಹ ಗಂಭೀರ ಅಪರಾಧ. ಚುನಾವಣಾ ಆಯೋಗವು ಈ ಪ್ರಕರಣವನ್ನು ಡಿವಿಸಿಗೆ ನೀಡಿದ್ದು, ಇದು ಡಿವಿಸಿಯಿಂದ ತನಿಖೆಯಾಗುವ ವಿಚಾರವಲ್ಲ. ನಾಳೆ ಮಧ್ಯಾಹ್ನ ಚುನಾವಣಾ ಆಯೋಗದ ಅಧಿಕಾರಿಗಳನ್ನು ನಾನು , ಸಿದ್ದರಾಮಯ್ಯಅವರು ಹಾಗೂ ಪಕ್ಷದ ಇತರೆ ನಾಯಕರು ಭೇಟಿ ಮಾಡಲಿದ್ದೇವೆ ಎಂದು ಹೇಳಿದರು.

ಪ್ರಕರಣ ಸಂಬಂಧ ಇಂದು ಪೊಲೀಸರು ಚಿಲುಮೆ ಸಂಸ್ಥೆ ಮೇಲೆ ದಾಳಿ ನಡೆಸಿದ್ದು, ಮಹತ್ವದ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಹಾಗೂ ಈ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Share.
Exit mobile version