ರಾಮನಗರ : ಮತದಾರರ ವೋಟರ್ ಐಡಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸರ್ಕಾರ ಹಣ್ಣು ತಿಂದವರನ್ನು ಬಿಟ್ಟು ಸಿಪ್ಪೆ ತಿಂದವರನ್ನು ಬಂಧಿಸಿದ್ದಾರೆ ಎಂದು ಕಿಡಿಕಾರಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಇದೊಂದು ಗಂಭೀರ ಪ್ರಕರಣವಾಗಿದ್ದರೂ ಕೂಡ ಹಿರಿಯ ಅಧಿಕಾರಿಗಳನ್ನು ಬಂಧಿಸುವ ಪ್ರಯತ್ನ ನಡೆದಿಲ್ಲ ಎಂದು ಡಿಕೆಶಿ ಕಿಡಿಕಾರಿದರು.
ಡಿ.ಕೆ ಶಿವಕುಮಾರ್ ಜೈಲಿಗೆ ಹೋಗುತ್ತಾರೆ ಎಂದು ಸಚಿವ ಅಶ್ವಥ್ ನಾರಾಯಣ್ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ ‘ ತಮ್ಮನ್ನು ಜೈಲಿಗೆ ಕಳುಹಿಸಲು ಏನೆಲ್ಲಾ ಹುನ್ನಾರ ನಡೆದಿದೆ ಎಂಬುದು ಚೆನ್ನಾಗಿ ಗೊತ್ತಿದೆ. ತಾವು ಜೈಲಿಗೆ ಹೋದರೆ ಅಶ್ವಥ್ ನಾರಾಯಣ್ ಅವರನ್ನು ಅಲ್ಲೇ ಭೇಟಿಯಾಗುವುದೆಂದು ಹೇಳಿದರು.
‘ಪಡಿತರ ಚೀಟಿದಾರ’ರಿಗೆ ಬಿಗ್ ಶಾಕ್ ; ಕೇಂದ್ರ ಸರ್ಕಾರ ಮಹತ್ವದ ಘೋಷಣೆ, ಆ ಎಲ್ಲ ‘ಕಾರ್ಡ್’ ರದ್ದು