ಬೆಂಗಳೂರು : ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇಡೀ ಭಾರತಕ್ಕೆ ದೊಡ್ಡ ಶಕ್ತಿ ಸಿಕ್ಕಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್ ದೇಶದ ಎಲ್ಲ ರಾಜ್ಯಗಳಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ತರುವ ಸವಾಲು ಅವರ ಮೇಲಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ‘ಖರ್ಗೆ ಅವರ ಆಯ್ಕೆ ದೇಶಕ್ಕೆ ದೊಡ್ಡ ಸಂದೇಶ ರವಾನಿಸಿದೆ. ಖರ್ಗೆ ಅವರು ಮೂರನೇ ಶಕ್ತಿ ಕೇಂದ್ರ ಆಗುವುದಿಲ್ಲ. ಎಐಸಿಸಿ ಅಧ್ಯಕ್ಷ ಸ್ಥಾನವೇ ಶಕ್ತಿ ಕೇಂದ್ರ’ ಎಂದು ಹೇಳಿದ್ದಾರೆ.
ರಾಯಚೂರಿನ ಭಾರತ ಜೋಡೋ ಯಾತ್ರೆಗೆ ಪ್ರಿಯಾಂಕಾ ಗಾಂಧಿ ಅವರು ಆಗಮಿಸುವ ವಿಶ್ವಾಸವಿದೆ. ಈಗಾಗಲೇ ಸೋನಿಯಾ ಗಾಂಧಿ ಅವರು ಮೂರು ದಿನ ರಾಜ್ಯದಲ್ಲೇ ವಾಸ್ತವ್ಯ ಹೂಡಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದರು. ರಾಹುಲ್ ಗಾಂಧಿ ಅವರು ಇನ್ನೆರಡು ದಿನ ಮಾತ್ರ ರಾಜ್ಯದಲ್ಲಿ ಪಾದಯಾತ್ರೆ ನಡೆಸಲಿದ್ದಾರೆ ಎಂದರು.
ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಆಯ್ಕೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿಯಾದ ಶಶಿ ತರೂರ್ ಅವರಿಗೆ ಕೇವಲ 1072 ಮತಗಳನ್ನು ಪಡೆದಿದ್ದಾರೆ. ಈಮೂಲಕ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.
ನಾನು ಪಕ್ಷದ ಸಿಪಾಯಿ ಮತ್ತು ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು. ಸೋನಿಯಾ ಗಾಂಧಿ ಅವರಿಗೆ ಧನ್ಯವಾದಗಳು. ಅವರ ನೇತೃತ್ವದಲ್ಲಿ ನಾವು ಎರಡು ಬಾರಿ ಕೇಂದ್ರದಲ್ಲಿ ಸರ್ಕಾರ ರಚಿಸಿದ್ದೇವೆ. ರಾಜ್ಯಗಳಲ್ಲೂ ನಾವು ಬಲಿಷ್ಠರಾಗಿದ್ದೆವು. ಅವರ ಪಾತ್ರ ನೆನಪಿನಲ್ಲಿ ಉಳಿಯುತ್ತದೆ ಎಂದು ಖರ್ಗೆ ಹೇಳಿದ್ದಾರೆ. ಆಂತರಿಕ ಚುನಾವಣೆಯಲ್ಲಿ ತಮ್ಮ ಎದುರಾಳಿಯಾಗಿದ್ದ ಶಶಿ ತರೂರ್ (Shashi Tharoor) ಅವರೊಂದಿಗೆ ಒಟ್ಟಾಗಿ ಕೆಲಸ ಮಾಡುವುದಾಗಿ ಹೇಳಿದರು.
ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿ ಜ್ಯುವೆಲ್ಲರ್ ಶಾಪ್ ನಲ್ಲಿ ದರೋಡೆ : 20 ಲಕ್ಷ ದೋಚಿದ ಖದೀಮರು