Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿಕ್ಕಮ್ಮನ ಮದುವೆಗೆ ವೀಸಾ ವಿಸ್ತರಣೆ : ಪಾಕಿಸ್ತಾನದ ಮೂವರು ಮಕ್ಕಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ | India -Pak war

09/05/2025 12:53 PM

BREAKING : ಜಮ್ಮು, ಉಧಂಪುರದಿಂದ ದೆಹಲಿಗೆ ವಿಶೇಷ ರೈಲು ಘೋಷಣೆ ಮಾಡಿದ ಭಾರತೀಯ ರೈಲ್ವೆ | India-Pak war

09/05/2025 12:47 PM

BREAKING : ಕಾಶ್ಮೀರದಲ್ಲಿ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ 7 ಉಗ್ರರನ್ನು ಹತ್ಯೆಗೈದ ‘BSF’ | Watch Video

09/05/2025 12:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನ ನೀಡಿ: ಕೇಂದ್ರಕ್ಕೆ DKS ಆಗ್ರಹ
KARNATAKA

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನ ನೀಡಿ: ಕೇಂದ್ರಕ್ಕೆ DKS ಆಗ್ರಹ

By kannadanewsnow0918/02/2025 4:02 PM

ರಾಜಸ್ಥಾನ : “ಕೇಂದ್ರ ಸರಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು.

ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ “2047ರಲ್ಲಿ ಭಾರತ ಜಲ ಸಮೃದ್ಧಿ ರಾಷ್ಟ್ರ” ಎಂಬ 2ನೇ ಅಖಿಲ ಭಾರತ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು.

“ಕರ್ನಾಟಕ ರಾಜ್ಯದ ಯೋಜನೆಗಳಿಗೆ ಕೇಂದ್ರ ಜಲಶಕ್ತಿ ಸಚಿವಾಲಯವು ಆದ್ಯತೆ ಮೇರೆಗೆ ಅಗತ್ಯ ಕ್ರಮ ಕೈಗೊಂಡು ಅನುಮತಿ ಕೊಡಿಸಬೇಕು. ಮೇಕೆದಾಟು ಯೋಜನೆಗೆ ಡಿಪಿಆರ್ ಪರಿಗಣಿಸಿ, ಅನುಮತಿ ನೀಡುವಂತೆ ಸಿಡಬ್ಲ್ಯೂಸಿಗೆ ನಿರ್ದೇಶನ ನೀಡಬೇಕು. ಇದರಿಂದ ತಮಿಳುನಾಡಿಗೆ ಪ್ರತಿ ತಿಂಗಳ ಲೆಕ್ಕಾಚಾರದ ನೀರು ನೀಡಬಹುದು. ಜತೆಗೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮತ್ತು ಬೆಂಗಳೂರಿನ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತದೆ” ಎಂದು ಹೇಳಿದರು.

“2023-24 ರ ಕೇಂದ್ರ ಬಜೆಟ್ನಲ್ಲಿ ಮಧ್ಯ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಒದಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಘೋಷಿಸಿದ್ದರೂ ಈವರೆಗೂ ಹಣ ಬಿಡುಗಡೆಯಾಗಿಲ್ಲ. ಹೀಗಾಗಿ ಬೇಗನೆ ಯೋಜನೆ ಪೂರ್ಣಗೊಳಿಸಲು ಹಣ ಬಿಡುಗಡೆ ಮಾಡುವಂತೆ ಸಚಿವಾಲಯಕ್ಕೆ ವಿನಂತಿಸುತ್ತೇನೆ” ಎಂದರು.

“2011 ರ ಸೆಪ್ಟೆಂಬರ್ 16 ರಂದು ನೀಡಿರುವ ತೀರ್ಪಿನಲ್ಲಿ ಕೆಲವು ಬದಲಾವಣೆ ಮಾಡಲು ಸರ್ವೋಚ್ಛ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜತೆಗೆ ಕೃಷ್ಣಾ ಜಲ ವಿವಾದ ನ್ಯಾಯಮಂಡಳಿಯು (KWDT-II) 2010ರಲ್ಲಿ ನೀಡಿರುವ ತೀರ್ಪಿನ ಅನ್ವಯ ತನಗೆ ಮೀಸಲಾಗಿರುವ ನೀರನ್ನು ಕರ್ನಾಟಕ ಬಳಸಿಕೊಳ್ಳಲು ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ವಿನಂತಿಸಿಕೊಳ್ಳುತ್ತೇನೆ” ಎಂದು ಹೇಳಿದರು.

“ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಮೇಲೆ ಒತ್ತಡ ತಂದು, 2018ರ ಆಗಸ್ಟ್ ನಲ್ಲಿ ಮಹದಾಯಿ ಜಲ ವಿವಾದ ನ್ಯಾಯಮಂಡಳಿ ನೀಡಿದ ತೀರ್ಪಿನ ಅನ್ವಯ ಕಳಸಾ ನಾಲಾ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮತಿ ದೊರಕಿಸಿಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಜಲಶಕ್ತಿ ಸಚಿವಾಲಯವು ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ಮೇಲೆ ಒತ್ತಡ ಹೇರಿ, ನದಿ ಜೋಡಣೆ ಯೋಜನೆಯಡಿ ಗೋದಾವರಿ- ಕಾವೇರಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಪಾಲನ್ನು ಮರುಪರಿಶೀಲನೆ ಮಾಡಬೇಕು. ಈ ಯೋಜನೆಯಡಿ ಪ್ರಸ್ತುತ ಕರ್ನಾಟಕಕ್ಕೆ ಕೇವಲ 15.891 ಟಿಎಂಸಿ (ಶೇ. 10.74) ನೀರನ್ನು ಮಾತ್ರ ಹಂಚಿಕೆ ಮಾಡಲಾಗಿದೆ” ಎಂದರು.

“ನಮ್ಮ ದೇಶವು ಪ್ರಪಂಚದ ಶೇ.18 ರಷ್ಟು ಜನಸಂಖ್ಯೆ ಹೊಂದಿದೆ. ಆದರೆ ಶೇ. 4 ರಷ್ಟು ಮಾತ್ರ ಶುದ್ದ ಕುಡಿಯುವ ನೀರಿನ ಮೂಲವನ್ನು ಹೊಂದಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ದೇಶವು ಸಾಕಷ್ಟು ಸವಾಲು ಎದುರಿಸಬೇಕಿದೆ. ಕೃಷಿ ಅಗತ್ಯಗಳಿಗೆ, ಬೆಳೆಯುತ್ತಿರುವ ಜನಸಂಖ್ಯೆಗೆ, ನಗರಗಳ ವಿಸ್ತರಣೆಗೆ, ಕೈಗಾರಿಕೆಗಳಿಗೆ ನೀರು ಬೇಡಿಕೆ ಪೂರೈಸಲು ಈಗಿನಿಂದಲೇ ಸನ್ನದ್ಧವಾಗಿರಬೇಕು” ಎಂದು ಹೇಳಿದರು.

“ದೇಶದಲ್ಲಿ ಈವರೆಗೆ ಸುಮಾರು 253 ಶತಕೋಟಿ ಘನ ಮೀಟರ್ (BCM) ನೀರಿನ ಸಂಗ್ರಹಣಾ ಸಾಮರ್ಥ್ಯವಿದೆ. ನಮ್ಮ ದೇಶವು ಸುಸ್ಥಿರ ಪ್ರಗತಿ ಸಾಧಿಸಲು ನೀರಿನ ಸಂಪನ್ಮೂಲ ಬಲಪಡಿಸುವ ಅಗತ್ಯವಿದೆ. ನೀರಿನ ಸಂಗ್ರಹ ಸಾಮರ್ಥ್ಯ ಮತ್ತು ಜಿಡಿಪಿ ಬೆಳವಣಿಗೆ ನಡುವೆ ನೇರ ಸಂಬಂಧವಿದೆ ಎಂದು ಅನೇಕ ತಜ್ಞರು ಹೇಳಿದ್ದಾರೆ” ಎಂದರು.

“ನೀರು ವಿಶಿಷ್ಟ ಸಂಪನ್ಮೂಲ. ಸುಸ್ಥಿರ ಆರ್ಥಿಕ ಬೆಳವಣಿಗೆಗೆ, ಮಾನವನ ಮೂಲಭೂತ ಅಗತ್ಯ ಪೂರೈಸಲು, ಪರಿಸರ ಸಮತೋಲನ ಕಾಯ್ದುಕೊಳ್ಳಲು ನೀರು ಮೂಲಾಧಾರ. ಹವಾಮಾನ ಬದಲಾವಣೆ, ಹೆಚ್ಚುತ್ತಿರುವ ನೀರಿನ ಮಾಲಿನ್ಯ ಮತ್ತು ವಿವಿಧ ವಲಯಗಳು ಅಥವಾ ಬಳಕೆದಾರರ ನಡುವಿನ ಸ್ಪರ್ಧೆಯಿಂದ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ” ಎಂದರು.

“ಕರ್ನಾಟಕವು ಪರಿಣಾಮಕಾರಿ ನಿರ್ವಹಣೆ ಮತ್ತು ನೀರಿನ ಬಳಕೆಯ ದಕ್ಷತೆಯನ್ನು ಸಾಧಿಸಲು ಅನೇಕ ಸುಧಾರಣೆಗಳನ್ನು ಜಾರಿಗೆ ತಂದಿದೆ. ನೀರಾವರಿ ಮತ್ತು ಕುಡಿಯುವ ನೀರಿನ ಕಾಮಗಾರಿಗಳಿಂದ ಅಕ್ರಮವಾಗಿ ನೀರು ಬಳಸಿಕೊಳ್ಳುವುದನ್ನು ತಡೆಯಲು ಕರ್ನಾಟಕ ನೀರಾವರಿ ಕಾಯ್ದೆಗೆ 1965ಕ್ಕೆ, 2024ರ ಆಗಸ್ಟ್ ನಲ್ಲಿ ತಿದ್ದುಪಡಿ ಮಾಡಲಾಯಿತು. ಕಾಲುವೆಗಳ ಮೂಲಕ ಅಕ್ರಮವಾಗಿ ನೀರು ಮೇಲೆತ್ತುವುದನ್ನು ತಪ್ಪಿಸಿ, ಕಾಲುವೆ ಕೊನೆ ಭಾಗದ ರೈತರಿಗೆ ನೀರು ಹೋಗುವಂತೆ ಮಾಡಲು ಈ ತಿದ್ದುಪಡಿ ಮಾಡಲಾಗಿದೆ. ಇದರ ವ್ಯಾಜ್ಯಗಳ ವಿಚಾರಣೆಗೆ ನೀರಾವರಿ ನ್ಯಾಯಾಲಯ ಸ್ಥಾಪನೆಗೆ ಅಗತ್ಯ ಸೆಕ್ಷನ್ ಗಳನ್ನು ಕಾಯ್ದೆಯಲ್ಲಿ ಸೇರಿಸಲಾಗಿದೆ, ಅಕ್ರಮಗಳ ವಿಚಾರಣೆ ನಡೆಸಲು ಅಧಿಕಾರಿಗಳಿಗೆ ಸೂಕ್ತ ಅಧಿಕಾರ ನೀಡಲಾಗಿದ್ದು, ಪೊಲೀಸರನ್ನು ಒಳಗೊಂಡ ಕಾರ್ಯಪಡೆಗೆ ಅವಕಾಶ ನಿಡುವ ಕುರಿತು ಈ ತಿದ್ದುಪಡಿ ಮಾಡಲಾಗಿದೆ” ಎಂದು ತಿಳಿಸಿದರು.

“ನೀರಾವರಿ ವಲಯದ ಪರಿಣಾಮಕಾರಿ ನಿರ್ವಹಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ನೂತನ ರಾಜ್ಯ ಜಲ ನೀತಿಯನ್ನು 2022 ರಲ್ಲಿ ಜಾರಿಗೆ ತರಲಾಯಿತು. ಜಲ ಸಂರಕ್ಷಣೆ ಹಾಗೂ ಆರೋಗ್ಯ, ಆಹಾರ, ಇಂಧನ, ಪರಿಸರ ಉದ್ದೇಶಕ್ಕೆ ನೀರಿನ ಮೂಲಗಳ ಸಮರ್ಪಕ ಬಳಕೆಗೆ ಒತ್ತು ನೀಡಲು ಕೆಲವು ಕ್ರಮಗಳನ್ನು ಕೈಗೊಳ್ಳಬೇಕಿದೆ. ಅವುಗಳೆಂದರೆ, ಪ್ರಸ್ತುತ ಜಲ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 29 ವಿವಿಧ ಶಾಸನಗಳಿದ್ದು, ಆ ಪೈಕಿ 14 ಕೇಂದ್ರ ಸರ್ಕಾರ ಹಾಗೂ 15 ರಾಜ್ಯ ಸರ್ಕಾರಗಳ ಕಾಯ್ದೆಗಳಾಗಿವೆ. ಮುಂದಿನ ದಿನಗಳಲ್ಲಿ ನೀರಿನ ಪರಿಣಾಮಕಾರಿ ಬಳಕೆಗೆ ಇನ್ನಷ್ಟು ತಿದ್ದುಪಡಿ ಮಾಡುವುದರ ಜತೆಗೆ ಹೊಸ ಕಾಯ್ದೆಗಳನ್ನು ಜಾರಿಗೆ ತರಬೇಕು. ಅಧಿಕಾರಗಳು, ಪ್ರಾಧಿಕಾರಗಳು, ಸಿಬ್ಬಂದಿ ಮತ್ತು ಸಂಪನ್ಮೂಲಗಳೊಂದಿಗೆ ಹೊಸ ಆಡಳಿತ ಸಂಸ್ಥೆಗಳ ಸ್ಥಾಪನೆ ಮಾಡಬೇಕು. ಸರ್ಕಾರಿ ಇಲಾಖೆಗಳ, ಸಂಸ್ಥೆಗಳ ಪುನರ್ ರಚನೆ. ಇವುಗಳ ನಿರ್ವಹಣೆಗಾಗಿ ನೂತನ ನಿರ್ದಿಷ್ಟ ಕಾರ್ಯಾಚರಣಾ ಪ್ರಕ್ರಿಯೆಗಳ (Standard Operating Procedures) ಅಭಿವೃದ್ಧಿ ಮತ್ತು ಅಳವಡಿಕೆ ಮಾಡಿಕೊಳ್ಳಬೇಕಿದೆ” ಎಂದರು.

“ಮಾನ್ಯ ಕೇಂದ್ರ ಸಚಿವರು ಕರ್ನಾಟಕದ ಬಾಕಿ ಇರುವ ಸಮಸ್ಯೆಗಳನ್ನು ಪರಿಗಣಿಸಲು ಮತ್ತು ಪರಿಹರಿಸಬೇಕಾಗಿ ಮನವಿ ಮಾಡುತ್ತೇನೆ. ಉತ್ತಮ ಸಂದರ್ಭದಲ್ಲಿ ನೀರಿನ ಕುರಿತು ಜಲ ಸಮ್ಮೇಳನವನ್ನು ಆಯೋಜಿಸಿದ್ದಕ್ಕಾಗಿ ಜಲಶಕ್ತಿ ಸಚಿವಾಲಯಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಹೇಳಿದರು.

ಸಾರ್ವಜನಿಕರಿಗೆ ಮಹತ್ವದ ಮಾಹಿತಿ: ನಿಮ್ಮ ‘ಇ-ಖಾತಾ ಸಮಸ್ಯೆ’ಗಳಿಗೆ ಇಲ್ಲಿದೆ ‘ರಾಜ್ಯ ಸರ್ಕಾರ’ದ ಉತ್ತರ

BREAKING : ಬೆಂಗಳೂರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಭೀಕರ ಅಗ್ನಿ ದುರಂತ : 6 ಜನರಿಗೆ ಗಂಭೀರ ಗಾಯ!

BREAKING:ಅಯೋಧ್ಯೆ ರಾಮ ಮಂದಿರದ ಮೇಲೆ ಅಪರಿಚಿತ ಡ್ರೋನ್ ಹೊಡೆದುರುಳಿಸಿದ ಭದ್ರತಾ ಪಡೆ, FIR ದಾಖಲು

Share. Facebook Twitter LinkedIn WhatsApp Email

Related Posts

‘ಆಪರೇಷನ್ ಸಿಂಧೂರ್’: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ | Operation Sindoor

09/05/2025 12:10 PM1 Min Read

BREAKING : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

09/05/2025 11:46 AM1 Min Read

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM4 Mins Read
Recent News

ಚಿಕ್ಕಮ್ಮನ ಮದುವೆಗೆ ವೀಸಾ ವಿಸ್ತರಣೆ : ಪಾಕಿಸ್ತಾನದ ಮೂವರು ಮಕ್ಕಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ | India -Pak war

09/05/2025 12:53 PM

BREAKING : ಜಮ್ಮು, ಉಧಂಪುರದಿಂದ ದೆಹಲಿಗೆ ವಿಶೇಷ ರೈಲು ಘೋಷಣೆ ಮಾಡಿದ ಭಾರತೀಯ ರೈಲ್ವೆ | India-Pak war

09/05/2025 12:47 PM

BREAKING : ಕಾಶ್ಮೀರದಲ್ಲಿ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ 7 ಉಗ್ರರನ್ನು ಹತ್ಯೆಗೈದ ‘BSF’ | Watch Video

09/05/2025 12:44 PM

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ IPL ಪಂದ್ಯಾವಳಿ ಅನಿರ್ದಿಷ್ಟವಾಗಿ ಸ್ಥಗಿತಗೊಳಿಸಿದ BCCI | India – Pak war

09/05/2025 12:36 PM
State News
KARNATAKA

‘ಆಪರೇಷನ್ ಸಿಂಧೂರ್’: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ | Operation Sindoor

By kannadanewsnow8909/05/2025 12:10 PM KARNATAKA 1 Min Read

ಉಡುಪಿ: ಭಾರತೀಯ ಸಶಸ್ತ್ರ ಪಡೆಗಳ ಆಪರೇಷನ್ ಸಿಂಧೂರ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 25ಕ್ಕೂ…

BREAKING : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

09/05/2025 11:46 AM

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.