Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಪ ಕಛೇರಿಗಳಲ್ಲೇ ಇ – ಸ್ವತ್ತು ವಿತರಣೆ – ಪೌರಾಯುಕ್ತೆ ಎಸ್.ಎನ್. ರಾಧಿಕಾ

18/04/2026 10:54 AM

JOB ALERT : `SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : `CRPF’ ನಲ್ಲಿ 9,195 ಕಾನ್ಸ್‌ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

18/04/2026 10:47 AM

BREAKING : ಶಾಸಕರ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನವನ್ನು ತಮ್ಮ ಕ್ಷೇತ್ರಕ್ಕೆ ಕೊಂಡೋಯ್ದ ಸಚಿವರು!

18/04/2026 10:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡಿ: ನಿರ್ಮಲಾ ಸೀತಾರಾಮನ್ ಗೆ DKS ಪತ್ರ
KARNATAKA

ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡಿ: ನಿರ್ಮಲಾ ಸೀತಾರಾಮನ್ ಗೆ DKS ಪತ್ರ

By kannadanewsnow0925/01/2025 4:52 PM

ಬೆಂಗಳೂರು : ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದಾರೆ.

ಮುಂಬರುವ ಫೆಬ್ರವರಿ 1ರಂದು ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು, ಈ ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯವಾಗಿರುವ ಆರ್ಥಿಕ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

“ಬೆಂಗಳೂರು ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಂತ್ರಜ್ಞಾನ ಪ್ರಗತಿ ಹಾಗೂ ಬಂಡವಾಳ ಹೂಡಿಕೆ ಆಕರ್ಷಣೆಯ ತಾಣವಾಗಿ ಬೆಳೆಯುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ ಮೂಲಕ ಬೆಂಗಳೂರು ಜಾಗತಿಕ ನಗರವಾಗಿ ರೂಪುಗೊಂಡಿದ್ದು, ದೇಶದ ಯುವಕರಿಗೆ ಉದ್ಯೋಗ ಸೃಷ್ಟಿಸಿ, ಆರ್ಥಿಕ ಪ್ರಗತಿಗೆ ನೆರವಾಗಿದೆ. ಬೆಂಗಳೂರು ನಿರೀಕ್ಷೆಗೂ ಮೀರಿ ಬೆಳೆಯುತ್ತಿರುವ ಪರಿಣಾಮ, ನಗರದ ಜನಸಂಖ್ಯೆ 1.50 ಕೋಟಿ ಸನಿಹದಲ್ಲಿದೆ. ಹೀಗಾಗಿ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿ ಮಾಡಿ ಬೆಂಗಳೂರನ್ನು ದೇಶದ ಸಿಲಿಕಾನ್ ವ್ಯಾಲಿ ಎಂಬ ಹಿರಿಮೆ ಉಳಿಸಿಕೊಳ್ಳಬೇಕಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿದ್ದು, ಮುಂಬರುವ ಬಜೆಟ್ ನಲ್ಲಿ ಈ ಯೋಜನೆಗಳಿಗೆ ಪೂರಕವಾಗಿ ಅನುದಾನ ನೀಡಬೇಕು” ಎಂದು ತಿಳಿಸಿದ್ದಾರೆ.

ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ

ಭೂಮಿಯ ಕೊರತೆಯಿಂದಾಗಿ ಬೆಂಗಳೂರಿನಲ್ಲಿರುವ ಹಾಲಿ ರಸ್ತೆಗಳ ಅಗಲೀಕರಣ ಕಷ್ಟವಾಗಿದೆ. ಹೀಗಾಗಿ ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಹೆಬ್ಬಾಳದ ಎಸ್ಟೀಮ್ ಮಾಲ್ ನಿಂದ ಹೆಚ್ ಎಸ್ ಆರ್ ಬಡಾವಣೆಯ ಸಿಲ್ಕ್ ಬೋರ್ಡ್ ಜಂಕ್ಷನ್ ವರೆಗೂ ಉತ್ತರ- ದಕ್ಷಿಣ 18.5 ಕಿ.ಮೀ ಟನಲ್ ರಸ್ತೆ ನಿರ್ಮಾಣಕ್ಕೆ ₹15 ಸಾವಿರ ಕೋಟಿ ವೆಚ್ಚವಾಗಲಿದೆ.

ಕೆ.ಆರ್ ಪುರ ವೃತ್ತದಿಂದ ನಾಯಂಡನಹಳ್ಳಿ ಜಂಕ್ಷನ್ ವರೆಗೂ 28.5 ಕಿ.ಮೀ ಟನಲ್ ರಸ್ತೆ ನಿರ್ಮಾಣಕ್ಕೆ ₹25 ಸಾವಿರ ಕೋಟಿ ವೆಚ್ಚವಾಗಲಿದೆ.

ಈ ಯೋಜನೆಗಾಗಿ ರಾಜ್ಯ ಸರ್ಕಾರ 19 ಸಾವಿರ ಕೋಟಿ ಮೌಲ್ಯದ ಡಿಪಿಆರ್ ಸಿದ್ಧಪಡಿಸಿ ಸಾರ್ವಜನಿಕ ಚರ್ಚೆಗೆ ಅವಕಾಶ ನೀಡಿದೆ” ಎಂದು ತಿಳಿಸಿದ್ದಾರೆ.

ಮೆಟ್ರೋ ಸೇರಿದಂತೆ ಎಲಿವೆಟೆಡ್ ಕಾರಿಡಾರ್ (ಡಬಲ್ ಡೆಕ್ಕರ್ ಮೇಲ್ಸೇತುವೆ)

ನಮ್ಮ ಮೆಟ್ರೋದ ಮೂರನೇ ಹಂತದ ಹಳದಿ ಮಾರ್ಗದಲ್ಲಿ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ವರೆಗೂ ನಿರ್ಮಿಸಲಾಗಿರುವ ಡಬಲ್ ಡೆಕ್ಕರ್ ಮೇಲ್ಸೇತುವೆ ಯಶಸ್ವಿ ಹಿನ್ನೆಲೆಯಲ್ಲಿ ಮೆಟ್ರೋ ನಾಲ್ಕನೇ ಹಂತದ ಯೋಜನೆಯನ್ನು ಡಬಲ್ ಡೆಕ್ಕರ್ ಮೂಲಕ ನಿರ್ಮಿಸಲು ತೀರ್ಮಾನಿಸಲಾಗಿದೆ.

ಜೆ.ಪಿ ನಗರದಿಂದ ಹೆಬ್ಬಾಳದವರೆಗೆ ಹಾಗೂ ಹೊಸಹಳ್ಳಿಯಿಂದ ಕಡಬಗೆರೆವರೆಗೂ 45 ಕಿ.ಮೀ ಉದ್ದದ ಈ ಮಾರ್ಗಕ್ಕೆ ಹೆಚ್ಚುವರಿಯಾಗಿ ₹8916 ಕೋಟಿ ಅಗತ್ಯವಿದೆ” ಎಂದು ತಿಳಿಸಿದ್ದಾರೆ.

17 ಮೇಲ್ಸೇತುವೆ, 300 ಕಿ.ಮೀ ಬಫರ್ ವಲಯ ರಸ್ತೆ

“ಇವುಗಳ ಜತೆಗೆ ನಗರದ ಸಂಚಾರಿ ದಟ್ಟಣೆ ಇರುವ 11 ಜಂಕ್ಷನ್ ಗಳಲ್ಲಿ 99.50 ಕಿ.ಮೀ ನಷ್ಟು 17 ಮೇಲ್ಸೇತುವೆ ನಿರ್ಮಾಣ ಅಗತ್ಯವಿದ್ದು, ಇದಕ್ಕಾಗಿ ₹12 ಸಾವಿರ ಕೋಟಿ ಹಣ ಬೇಕಾಗಿದೆ. ಪ್ರಮುಖ ನದಿ ಹಾಗೂ ದೊಡ್ಡ ಕೆರೆಗಳು ಹಾಗೂ ರಾಜಕಾಲುವೆ ಪಕ್ಕದ ಬಫರ್ ಪ್ರದೇಶಗಳನ್ನು ಒತ್ತುವರಿ ಮಾಡಿಕೊಳ್ಳಲಾಗುತ್ತಿದೆ. ಇದನ್ನು ತಪ್ಪಿಸಲು ಈ ಬಫರ್ ವಲಯದಲ್ಲಿ 300 ಕಿ.ಮೀ ಉದ್ದದ ರಸ್ತೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ₹3000 ಕೋಟಿ ಅಗತ್ಯವಿದೆ” ಎಂದು ತಿಳಿಸಲಾಗಿದೆ.

ಪಿಆರ್ ಆರ್ ಹಾಗೂ ನೀರು ಸರಬರಾಜು ಯೋಜನೆ

ಬೆಂಗಳೂರಿನ ದಟ್ಟಣೆ ನಿಯಂತ್ರಿಸಲು ಖಾಸಗಿ ಹಾಗೂ ಸರ್ಕಾರಿ ಸಹಭಾಗಿತ್ವದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 8 ಪಥಗಳ, 73.04 ಕಿ.ಮೀ ಉದ್ದದ ಬಿಸಿನೆಸ್ ಕಾರಿಡಾರ್ ನಿರ್ಮಾಣಕ್ಕೆ ಮುಂದಾಗಿದೆ. ಈ ಯೋಜನೆಯಲ್ಲಿ ₹21 ಸಾವಿರ ಕೋಟಿ ಭೂಸ್ವಾಧೀನ ಹಾಗೂ ₹6 ಸಾವಿರ ಕೋಟಿ ರಸ್ತೆ ನಿರ್ಮಾಣಕ್ಕೆ ಸೇರಿ ಒಟ್ಟು ₹27 ಸಾವಿರ ಕೋಟಿ ಅಗತ್ಯವಿದೆ. ಇನ್ನು ಕಾವೇರಿ 5ನೇ ಹಂತದ ಕುಡಿಯುವ ನೀರಿನ ಪೂರೈಕೆ ಮೂಲಕ ಬೆಂಗಳೂರಿನ ಕುಡಿಯುವ ನೀರಿನ ಬೇಡಿಕೆ ಪೂರ್ಣಗೊಳಿಸಲಾಗಿದ್ದು, ಹೆಚ್ಚುವರಿ ಬೇಡಿಕೆ ಪೂರೈಸಲು ಕಾವೇರಿ 6ನೇ ಹಂತದ ಯೋಜನೆ ಮೂಲಕ 2028ರ ವೇಳೆಗೆ 500 ಎಂಎಲ್ ಡಿ ನೀರು ಪೂರೈಸುವ ಉದ್ದೇಶವಿದೆ” ಎಂದು ತಿಳಿಸಿದ್ದಾರೆ.

“ಸಂಸತ್ತಿನಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ತಾವುಗಳು ಬೆಂಗಳೂರಿನ ಈ ಪ್ರಮುಖ ಯೋಜನೆಗಳಿಗೆ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡಬೇಕು” ಎಂದು ಮನವಿ ಮಾಡಿದ್ದಾರೆ.

BREAKING: ಆಸ್ಟ್ರೇಲಿಯನ್ ಓಪನ್ ಗೆದ್ದ ಮ್ಯಾಡಿಸನ್ ಕೀಸ್ | Australian Open 2025

ಪ್ರಧಾನಿ-ಗೃಹಮಂತ್ರಿ ಜೋಡಿಯಿಂದ ಚುನಾವಣಾ ಆಯೋಗದ ಸ್ವಾತಂತ್ರ್ಯಕ್ಕೆ ತೀವ್ರ ಧಕ್ಕೆ: ಕಾಂಗ್ರೆಸ್

Share. Facebook Twitter LinkedIn WhatsApp Email

Related Posts

ಉಪ ಕಛೇರಿಗಳಲ್ಲೇ ಇ – ಸ್ವತ್ತು ವಿತರಣೆ – ಪೌರಾಯುಕ್ತೆ ಎಸ್.ಎನ್. ರಾಧಿಕಾ

18/04/2026 10:54 AM2 Mins Read

BREAKING : ಶಾಸಕರ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನವನ್ನು ತಮ್ಮ ಕ್ಷೇತ್ರಕ್ಕೆ ಕೊಂಡೋಯ್ದ ಸಚಿವರು!

18/04/2026 10:25 AM1 Min Read

ಮಹಿಳಾ ಸಬಲೀಕರಣಕ್ಕೆ ಮತ್ತೊಂದು ಉದಾಹರಣೆ : ‘ಗೃಹಲಕ್ಷ್ಮಿ’ ಹಣದಿಂದ ಐಸ್ ಕ್ರೀಮ್ ಪಾರ್ಲರ್ ತೆರೆದ ಮಹಿಳೆ!

18/04/2026 10:14 AM1 Min Read
Recent News

ಉಪ ಕಛೇರಿಗಳಲ್ಲೇ ಇ – ಸ್ವತ್ತು ವಿತರಣೆ – ಪೌರಾಯುಕ್ತೆ ಎಸ್.ಎನ್. ರಾಧಿಕಾ

18/04/2026 10:54 AM

JOB ALERT : `SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : `CRPF’ ನಲ್ಲಿ 9,195 ಕಾನ್ಸ್‌ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

18/04/2026 10:47 AM

BREAKING : ಶಾಸಕರ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನವನ್ನು ತಮ್ಮ ಕ್ಷೇತ್ರಕ್ಕೆ ಕೊಂಡೋಯ್ದ ಸಚಿವರು!

18/04/2026 10:25 AM

ಮಹಿಳಾ ಸಬಲೀಕರಣಕ್ಕೆ ಮತ್ತೊಂದು ಉದಾಹರಣೆ : ‘ಗೃಹಲಕ್ಷ್ಮಿ’ ಹಣದಿಂದ ಐಸ್ ಕ್ರೀಮ್ ಪಾರ್ಲರ್ ತೆರೆದ ಮಹಿಳೆ!

18/04/2026 10:14 AM
State News
KARNATAKA

ಉಪ ಕಛೇರಿಗಳಲ್ಲೇ ಇ – ಸ್ವತ್ತು ವಿತರಣೆ – ಪೌರಾಯುಕ್ತೆ ಎಸ್.ಎನ್. ರಾಧಿಕಾ

By kannadanewsnow0518/04/2026 10:54 AM KARNATAKA 2 Mins Read

ಮಂಡ್ಯ :- ಮದ್ದೂರು ನಗರಸಭಾ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾಗಿರುವ ಗ್ರಾಮ ಪಂಚಾಯಿತಿ ಕಛೇರಿಗಳಲ್ಲೆ ( ಉಪ ಕಛೇರಿ ) ಇ…

BREAKING : ಶಾಸಕರ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನವನ್ನು ತಮ್ಮ ಕ್ಷೇತ್ರಕ್ಕೆ ಕೊಂಡೋಯ್ದ ಸಚಿವರು!

18/04/2026 10:25 AM

ಮಹಿಳಾ ಸಬಲೀಕರಣಕ್ಕೆ ಮತ್ತೊಂದು ಉದಾಹರಣೆ : ‘ಗೃಹಲಕ್ಷ್ಮಿ’ ಹಣದಿಂದ ಐಸ್ ಕ್ರೀಮ್ ಪಾರ್ಲರ್ ತೆರೆದ ಮಹಿಳೆ!

18/04/2026 10:14 AM

ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಜಿ ಕರೆದರೆ ನಾನು ಅರ್ಜಿ ಹಾಕಬಹುದು : ಸಿಎಂ ಕನಸು ಬಿಚ್ಚಿಟ್ಟ ಗೃಹ ಸಚಿವ ಪರಮೇಶ್ವರ್

18/04/2026 9:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.