ಬೆಂಗಳೂರು : ಹಿರಿಯ ವಕೀಲ ಹಾಗೂ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಕೀಲರ ಸಂಘದ ಉಪಾಧ್ಯಕ್ಷರಾದ ಡಿ.ಎಂ. ಲಿಂಗೇಗೌಡ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು, ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯ ಮೇಲೆ ಕೆಪಿಸಿಸಿಯ ಕಾನೂನು, ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ ರಾಜ್ಯ ಅಧ್ಯಕ್ಷ ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಈ ನೇಮಕ ಮಾಡಿದ್ದಾರೆ.
ಮೂಲತಃ ಕನಕಪುರದ ದೊಡ್ಡ ಕಬ್ಬಳ್ಳಿಯವರಾದ ಲಿಂಗೇಗೌಡ ಅವರು ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಕಳೆದ 28 ವರ್ಷಗಳಿಂದ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಕೀಲರ ಸಂಘದ ಮ್ಯಾಜಿಸ್ಟ್ರೇಟ್ ಘಟಕದ ಜಂಟಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿರುವ ಲಿಂಗೇಗೌಡ ಪ್ರಸ್ತುತ ಉಪಾಧ್ಯಕ್ಷರಾಗಿದ್ದಾರೆ.
ಮಾರ್ಚ್14 ಅಥವಾ 15 ರಂದು ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ, 7 ಹಂತಗಳಲ್ಲಿ ಮತದಾನ: ವರದಿ
Watch Video: ‘ಬರಗಾಲ’ದಲ್ಲೂ ಖುಲಾಯಿಸಿದ ‘ರೈತ’ನ ಅದೃಷ್ಠ: ‘ಬೇಸಿಗೆ’ಯಲ್ಲೂ ಬೋರಲ್ಲಿ 45 ಅಡಿಗೆ ‘2.5 ಇಂಚು’ ನೀರು