ತುಮಕೂರು : ಗ್ಯಾಸ್, ಪೆಟ್ರೋಲ್, ಡೀಸೆಲ್, ರೈತರ ಕೃಷಿ ಪರಿಕರದ ದರ ಹೆಚ್ಚಿಸಿದರು. ಯಾವ ಮುಖ ಹೊತ್ತುಕೊಂಡು ಮೋದಿ ಮೈಸೂರಿಗೆ ಬಂದಿದ್ದಾರೆ.ಬಿಜೆಪಿ ನರೇಂದ್ರ ಮೋದಿಗೆ ನಾಚಿಕೆ ಮಾನ ಮರ್ಯಾದೆ ಇದೆಯಾ? ಬಿಜೆಪಿಯವರ ಮನೆ ದೇವರೇ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ ಬಿ ಕ್ರಾಸ್ ನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಜಾರಿ ಮಾಡಿ ನುಡಿದಂತೆ ನಡೆದಿದೆ. ಗ್ಯಾರಂಟಿ ಜಾರಿ ಮಾಡಿದರೆ ರಾಜ ದಿವಾಳಿ ಆಗುತ್ತದೆ ಎಂದು ಮೋದಿ ಹಾಗೂ ಬಿಜೆಪಿಗೆ ಹೇಳಿತ್ತು ಇಂದು ಬಿಜೆಪಿ ಹಾಗೂ ಮೋದಿ ನಮ್ಮ ಗ್ಯಾರಂಟಿ ಪದವನ್ನೇ ಕದ್ದು ಬಿಟ್ಟಿದ್ದಾರೆ ಹತ್ತು ವರ್ಷಗಳ ಹಿಂದೆ ಬಿಜೆಪಿ ನೀಡಿದ್ದ ಭರವಸೆ ಈಡೇರಿಸಿದ್ದಾರಾ? ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುತ್ತೇವೆ ಅಂದಿದ್ದರು ಎಂದು ಕಿಡಿ ಕಾರಿದರು.
ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಬಿಜೆಪಿಯವರು ಹೇಳಿದ್ದರು. ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳಿದ್ದರು ಅದು ಯಾವುದಾದರು ಮಾಡಿದ್ದಾರಾ? ರಾಜ್ಯದಲ್ಲಿ ಬಿಜೆಪಿ ಅವಧಿಯಲ್ಲಿ ಲೂಟಿ ಮಾಡಿದ್ದು ಬಿಟ್ಟರೆ ಬೇರೆ ಏನಿಲ್ಲ. ಸೋಮಣ್ಣ ವಸತಿ ಸಚಿವರಾಗಿದ್ದರು. ಸೋಮಣ್ಣ ಬಡವರಿಗಾಗಿ ಒಂದೇ ಒಂದು ಮನೆ ಕಟ್ಟಿಸಿ ಕೊಟ್ಟಿದ್ದಾರಾ? ವರುಣ ಚಾಮರಾಜನಗರದಲ್ಲಿ ಸ್ಪರ್ಧಿಸಿ ವಿ ಸೋಮಣ್ಣ ಸೋತರು ಹಣ ಇದೆ ಎಂದು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ನಿಂತಿದ್ದಾರೆ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿ 50 ರಿಂದ 60 ಕೋಟಿ ರೂಪಾಯಿ ಹಣ ಖರ್ಚು ಮಾಡಿದ್ದರು ಎಂದರು.
ಆದರೆ ಇದೀಗ ಸೋಮಣ್ಣನ ಬಳಿ ಇನ್ನೂ ಎಷ್ಟು ಹಣ ಇರಬೇಕು ಹೇಳಿ ನೋಡೋಣ? ತುಮಕೂರು ಕಾಂಗ್ರೆಸ್ ಅಭ್ಯರ್ಥಿ ಬುದ್ಧ ಹನುಮಗೌಡ ಸರಳ ವ್ಯಕ್ತಿ ರೈತರು ಬಡವರ ಪರ ಇರುವ ಮುದ್ದ ಹನುಮೇಗೌಡಗೆ ಆಶೀರ್ವದಿಸಿ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣದಲ್ಲಿ ಹೇಳಿದರು.