ಮಂಡ್ಯ :- ಜನರ ನಂಬಿಕೆ ವಿಶ್ವಾಸಕ್ಕೆ ಕಳಂಕ ಬಾರದಂತೆ ಸಂಘದ ಮೂಲಕ ಸದಸ್ಯರಿಗೆ ಸಿಗಬಹುದಾದ ಎಲ್ಲಾ ಬಗೆಯ ಸಾಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ನೂತನ ನಿರ್ದೇಶಕರಿಗೆ ಶಾಸಕ ಕೆ.ಎಂ.ಉದಯ್ ಕಿವಿಮಾತು ಹೇಳಿದರು.
ಮದ್ದೂರು ತಾಲೂಕಿನ ಬೆಳತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ 11 ಅಭ್ಯರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಆರ್ಥಿಕಾಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಗ್ರಾಮದ ಜನರ ನಂಬಿಕೆ ವಿಶ್ವಾಸಕ್ಕೆ ಕಳಂಕ ಬಾರದಂತೆ ಸಂಘದ ಮೂಲಕ ಸದಸ್ಯರಿಗೆ ಸಿಗಬಹುದಾದ ಎಲ್ಲಾ ಬಗೆಯ ಸಾಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು ತಿಳಿಸಿದರು.
ಸಂಘದ ಷೇರುದಾರರು ರಾಜಕೀಯ ಬೆರೆಸದೆ ಒಗ್ಗಟ್ಟಿನಿಂದ 11 ಮಂದಿ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿರುವುದು ಸಂತಸದ ಸಂಗತಿಯಾಗಿದ್ದು, ನೂತನ ಆಡಳಿತ ಮಂಡಳಿ ಸಂಘದ ಮತ್ತಷ್ಟು ಉನ್ನತಿಕರಣಕ್ಕೆ ಶ್ರಮಿಸಬೇಕೆಂದರು.
ಸಂಘದ ಐದು ವರ್ಷಗಳ ಅವಧಿಗೆ ನಡೆದ ಚುನಾವಣೆ ವೇಳೆ 11 ಮಂದಿ ಅಭ್ಯರ್ಥಿಗನ್ನು ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಹಾಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ್, ಪುಟ್ಟಸ್ವಾಮಿ, ರಾಮು, ಪ್ರಸನ್ನಕುಮಾರ್, ಕೃಷ್ಣಪ್ಪ, ಮೂರ್ತಿ, ಶಂಭುಗೌಡ, ನರಸಿಂಹಮೂರ್ತಿ, ಮಂಗಳಗೌರಮ್ಮ, ರಜತ್, ಮಮತಾ, ಸಿದ್ದಯ್ಯ, ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಆಶಾ ಘೋಷಣೆ ಮಾಡಿದರು.
ಈ ವೇಳೆ ಮನ್ ಮುಲ್ ನಿರ್ದೇಶಕ ಹರೀಶ್ ಬಾಬು, ಸುಧಾಕರ್, ಪುಟ್ಟೇಗೌಡ, ಶರತ್, ಮಧು, ಶಿವರಾಂ, ಸುಧಾಕರ್, ಶ್ರೀನಿವಾಸ್, ಶೀತಲ್, ಪ್ರಭುಲಿಂಗ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್ ಮಂಡ್ಯ








