ಬೆಂಗಳೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ( Primary and Secondary School ) ಶಿಕ್ಷಕರ ಖಾಲಿ ಹುದ್ದೆ ಭರ್ತಿಗೆ ( Teacher Recruitment ) ಸರ್ಕಾರ ಕ್ರಮ ವಹಿಸಿದೆ. ಈಗಾಗಲೇ ಪದವೀಧರ ಪ್ರಾಥಮಿಕ ಶಿಕ್ಷಕರ 15,000 ಹುದ್ದೆ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಹೀಗಿದ್ದರೂ ಈಗ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಸಾವಿರಾರೂ ಹುದ್ದೆಗಳು ಖಾಲಿ ಇದ್ದಾವೆ ಎಂಬುದಾಗಿ ತಿಳಿದು ಬಂದಿದೆ.
ಸಿಎಂ ಬೊಮ್ಮಾಯಿಯಿಂದ ‘ಚಿಕ್ಕಮಗಳೂರು ಜಿಲ್ಲಾ ಉತ್ಸವ 2023’ ರ ಲಾಂಛನ ಬಿಡುಗಡೆ
ಈ ಬಗ್ಗೆ ಕರ್ನಾಟಕ ವಿಧಾನಸಭೆಯಲ್ಲಿ ಸದಸ್ಯ ಐಹೊಳೆ ಡಿ ಮಹಾಲಿಂಗಪ್ಪ ಕೇಳಿದಂತ ಚುಕ್ಕೆ ರಹಿತ ಪ್ರಶ್ನೆಗೆ ಉತ್ತರಿಸಿರುವಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ( Minister BC Nagesh ), ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ( Primary School ) ಒಟ್ಟು 46,104 ಹುದ್ದೆಗಳು ಖಾಲಿ ಇದ್ದಾವೆ. ಪ್ರೌಢ ಶಾಲೆಗಳಲ್ಲಿ 8,453 ಹುದ್ದೆಗಳು ಖಾಲಿ ಇದ್ದಾವೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಶಿಕ್ಷಕರ ಕೊರತೆಯನ್ನು ನೀಗಿಸಲು, ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8ನೇ ತರಗತಿಗಳು) ಒಟ್ಟು 15000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಒಟ್ಟು 27,000 ಅತಿಥಿ ಶಿಕ್ಷಕರುಗಳನ್ನು ( Guest Teacher ) ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳುವ ಮೂಲಕ, ಶಿಕ್ಷಕರ ಕೊರತೆಯನ್ನು ನೀಗಿಸಲು ಕ್ರಮ ವಹಿಸಿದೆ ಎಂದಿದ್ದಾರೆ.
ಇನ್ನೂ ಕಡಿಮೆ ಕಾರ್ಯಭಾರವಿರುವ ಶಾಲೆಗಳಲ್ಲಿನ ಶಿಕ್ಷಕರುಗಳನ್ನು ಹೆಚ್ಚಿನ ಕಾರ್ಯಭಾರವಿರುವ ಶಾಲೆಗಳಿಗೆ ಮರು ಹೊಂದಾಣಿಕೆ ಮೂಲಕ ಭರ್ತಿ ಮಾಡಿ, ಶೈಕ್ಷಣಿಕವಾಗಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
BIGG NEWS : ನಾಳೆ ‘ವಿಧಾನಪರಿಷತ್ ಉಪಸಭಾಪತಿ’ ಚುನಾವಣೆ : ಬಿಜೆಪಿ ಸದಸ್ಯರಿಗೆ ವಿಪ್ ಜಾರಿ
ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಒಟ್ಟು 5159 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.