ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜಕೀಯ ನಿವೃತ್ತಿಯಾಗಲಿದ್ದಾರೆ. ಅವರ ಮುಂದಿನ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ ಎಂಬುದಾಗಿ ಶಾಸಕ ಯತೀಂದ್ರ ತಿಳಿಸಿದ್ದರು. ಇಂತಹ ಪಕ್ಷಕ್ಕೆ ಮುಜುಗರ ಉಂಟು ಮಾಡುವಂತ ಹೇಳಿಕೆ ನೀಡಿದಂತ ಅವರ ವಿರುದ್ಧ ಶಿಸ್ತು ಕ್ರಮದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ಅಂತ ಮುಂದೆ ಓದಿ.
ಈ ಕುರಿತು ಮಾಧ್ಯಮದವರು ಯತೀಂದ್ರ ಅವರ ಹೇಳಿಕೆ ಹಾಗೂ ಬೇರೆ ಶಾಸಕರ ವಿರುದ್ಧ ಕೈಗೊಳ್ಳುವ ಶಿಸ್ತು ಕ್ರಮ ಅವರ ವಿರುದ್ಧ ಯಾಕೆ ತೆಗೆದುಕೊಳ್ಳುತ್ತಿಲ್ಲ ಎಂದು ಕೇಳಿದಾಗ, “ಈ ಸಂದರ್ಭದಲ್ಲಿ ನಾನು ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸೂಕ್ತ ಸಮಯದಲ್ಲಿ ನಾನು ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು.
ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 6 ಸಾವಿರ ಮತಗಳನ್ನು ತಿರುಚಲಾಗಿತ್ತು ಎಂದು ಎಸ್ಐಟಿ ದೃಢಪಡಿಸಿರುವ ಬಗ್ಗೆ ಕೇಳಿದಾಗ, “ಇದರಲ್ಲಿ ಯಾವುದೇ ಅನುಮಾನವಿಲ್ಲ. ದೂರವಾಣಿ ಸಂಖ್ಯೆಗಳ ಮೂಲಕ ಈ ಕೆಲಸ ಮಾಡಿದ್ದಾರೆ. ಈ ಬಗ್ಗೆ ಆ ಸಮಯದಲ್ಲೇ ಅಧಿಕಾರಿಗಳು ದೂರು ನೀಡಿದ್ದರು. ಈ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ” ಎಂದು ತಿಳಿಸಿದರು.
ರಾಜ್ಯದಲ್ಲೊಂದು ವಿನೂತನ ಪ್ರತಿಭಟನೆ: ಯೋಜನೆ ವಿರೋಧಿಸಿ ‘ಜಾನುವಾರು’ಗಳ ಮೇಲೆ ಬರವಣಿಗೆ
ನ.18ರಿಂದ 3 ದಿನ `ಬೆಂಗಳೂರು ಟೆಕ್ ಸಮ್ಮಿಟ್-2025’ ಆಯೋಜನೆ : CM ಸಿದ್ದರಾಮಯ್ಯ ಮಾಹಿತಿ