ನವದೆಹಲಿ: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷ ಸೇರಿದ್ದಂತ ಜಗದೀಶ್ ಶೆಟ್ಟರ್ ಮತ್ತೆ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಬಳಿಕ ಅವರು ಏನು ಹೇಳಿದ್ರು ಅಂತ ಮುಂದೆ ಓದಿ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಜಗದೀಶ್ ಶೆಟ್ಟರ್ ಅವರು, ಬಿಜೆಪಿ ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ನಾನು ಮತ್ತೆ ಬಿಜೆಪಿ ಸೇರಬೇಕೆಂದು ಅಪೇಕ್ಷೆ ವ್ಯಕ್ತಪಡಿಸಿದ್ದರು. ರಾಷ್ಟ್ರೀಯ ನಾಯಕರೂ ಅದೇ ಆಶಯ ವ್ಯಕ್ತಪಡಿಸಿದರು. ಬಿಜೆಪಿ ಪುನರ್ ಸೇರ್ಪಡೆ ಸಂತೋಷದ ಸಂಗತಿ ಎಂದರು.
ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಸದಸ್ಯತ್ವಕ್ಕೆ ಆಯ್ಕೆಯಾಗಿದ್ದು, ಆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಇ ಮೇಲ್ ಮೂಲಕ ಅದನ್ನು ತಿಳಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದನ್ನು ಇ ಮೇಲ್ ಮೂಲಕ ಕಳಿಸಿದ್ದೇನೆ. ರಾಜೀನಾಮೆ ಪತ್ರ ಕಳಿಸುವ ವ್ಯವಸ್ಥೆ ಮಾಡಿದ್ದೇನೆ ಎಂದು ವಿವರಿಸಿದರು.
ದೇಶದ ಹಿತರಕ್ಷಣೆಗೆ ಮೋದಿಜೀ ಅವರು ಶ್ರಮಿಸುತ್ತಿದ್ದಾರೆ. ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕಿದೆ. ಬಿಜೆಪಿ ಬೆಳವಣಿಗೆಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.