ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯ ವಿಚಾರ ಬಿಸಿ ಬಿಸಿಯಾಗಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಏನು ಹೇಳಿದ್ದಾರೆ ಅಂತ ಮುಂದೆ ಓದಿ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಮೊಟ್ಟೆಯಲ್ಲಿ ಕ್ಯಾನ್ಸರ್ ಉಂಟುಮಾಡುವ ಅಂಶಗಳು ಕಂಡುಬಂದಿವೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ವದಂತಿಗೆ ಜನರು ಭಯಪಡುವ ಅಗತ್ಯ ಇಲ್ಲ. ರಾಜ್ಯಾದ್ಯಂತ ಉಂಟಾಗಿರುವ ಆತಂಕವನ್ನು ಗಂಭೀರವಾಗಿ ಪರಿಗಣಿಸಿ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷೆ ನಡೆಸಲು ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.
ಮೊಟ್ಟೆಗಳ ಬಗೆಗೆ ಉಂಟಾಗಿರುವ ಸಂಶಯಕ್ಕೆ ಅನುಸಾರವಾಗಿ ಪರೀಕ್ಷೆ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಸಂಬಂಧಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂಬುದಾಗಿ ಎಚ್ಚರಿಸಿದ್ದಾರೆ.
ಇದೇ ರೀತಿಯಲ್ಲಿ ಈ ಹಿಂದೆ ಮೊಟ್ಟೆ ವಿಚಾರದಲ್ಲಿ ವದಂತಿ ಹರಡಿದಾಗ ನಡೆಸಿದ್ದ ಪರೀಕ್ಷೆಗಳಲ್ಲಿ ಮೊಟ್ಟೆಯಲ್ಲಿ ಯಾವುದೇ ರೀತಿಯ ಹಾನಿಕಾರಕ ಅಂಶಗಳು ಕಂಡುಬಂದಿರಲಿಲ್ಲ ಹಾಗಾಗಿ ಯಾವುದೇ ರೀತಿಯ ಸಮಸ್ಯೆ ಆಗುವುದಿಲ್ಲ ಎಂಬ ಭರವಸೆಯಿದೆ. ನಾಗರೀಕರು ನಿರ್ಭೀತಿಯಿಂದ ಇರುವಂತೆ ಕೋರಿದ್ದಾರೆ.
KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: 3,974 ಮಂದಿಯಿಂದ 7.61 ಲಕ್ಷ ದಂಡ ವಸೂಲಿ
BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ: ಇನ್ನೂ ಕೊಡುಗೈ ದಾನಿ ನೆನಪು ಮಾತ್ರ








