ನವದೆಹಲಿ: ಚನ್ನಪಟ್ಟಣದ ಶಾಸಕರಾಗಿದ್ದಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆದ್ದು ಕೇಂದ್ರ ಸಚಿವರಾಗಿದ್ದಾರೆ. ಈಗ ಆ ಕ್ಷೇತ್ರದ ಉಪ ಚುನಾವಣೆ ಗರಿಗೆದರಿದೆ. ಇದೇ ಸಂದರ್ಭದಲ್ಲಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಯಾರು ಅಭ್ಯರ್ಥಿ ಅನ್ನುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಆ ಬಗ್ಗೆ ಮುಂದೆ ಓದಿ.
ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿಗಳಾದ ದೇವೇಗೌಡರು ಹಾಗೂ ನನ್ನ ಹೆಸರು ಹಾಕಿಲ್ಲ ಎನ್ನುವ ಬಗ್ಗೆ ಬೇಸರ ಇಲ್ಲ. ನಾನು ಇದ್ದಲ್ಲಿಯೇ ನಾಡಪ್ರಭುಗಳನ್ನು ಸ್ಮರಿಸಿ ಗೌರವಿಸುತ್ತೇನೆ ಎಂದರು.
ಚನ್ನಪಟ್ಟಣಕ್ಕೆ ಎನ್ ಡಿಎ ಅಭ್ಯರ್ಥಿ ನಿಲ್ಲುತ್ತಾರೆ
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಬಿಜೆಪಿ ಅಭ್ಯರ್ಥಿ ಅಂತಲ್ಲ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಒಮ್ಮತವಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದರು.
ಇನ್ನೂ ಸಾಕಷ್ಟು ಸಮಯ ಇದೆ. ನಾವು ನಿರ್ಧಾರ ಮಾಡುತ್ತೇವೆ. ಮೈತ್ರಿ ಅಭ್ಯರ್ಥಿ ಅಲ್ಲಿ ಸ್ಪರ್ಧೆ ಮಾಡುತ್ತಾರೆ. ಬಿಜೆಪಿ -ಜೆಡಿಎಸ್ ಎನ್ನುವ ವಿಚಾರ ಅಲ್ಲಿ ಬರೋದೇ ಇಲ್ಲಾ. ಮೈತ್ರಿ ಅಭ್ಯರ್ಥಿ ಸ್ಪರ್ಧೆ ಮಾಡ್ತಾರೆ ಎಂದರು.
‘ನಾಡಪ್ರಭು ಕೆಂಪೇಗೌಡ’ರು ಕನ್ನಡದ ಸ್ವತ್ತು, ಕನ್ನಡಿಗರ ಅಸ್ಮಿತೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ