ಬೆಂಗಳೂರು: ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಸಾರಿಗೆ ಬಸ್ಸುಗಳಲ್ಲಿ ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತವಾಗಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ಸುಗಳಲ್ಲಿ ಸಂಚರಿಸೋದಕ್ಕಾಗಿ ದಾಖಲೆಯಾಗಿ ಆಧಾರ್ ಕಾರ್ಡ್, ವೋಟರ್ ಐಡಿ ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳನ್ನು ತೋರಿಸಬೇಕು. ಆದ್ರೇ ಇನ್ಮುಂದೆ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಮಹಿಳೆಯರು ಸಂಚರಿಸೋದಕ್ಕೆ ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಬೇಕು ಎಂಬುದಾಗಿ ಸುದ್ದಿಯೊಂದು ವೈರಲ್ ಆಗಿತ್ತು. ಆ ವೈರಲ್ ಸುದ್ದಿಯ ಅಸಲಿ ಸತ್ಯ ಏನು ಅಂತ ಮುಂದೆ ಓದಿ.
ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಕಾಂಗ್ರೆಸ್ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅದರಲ್ಲಿ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸೋದಕ್ಕೆ ಅವಕಾಶ ಮಾಡಿ ಕೊಡುವಂತ ಶಕ್ತಿ ಯೋಜನೆಯೂ ಒಂದಾಗಿದೆ. ಆರಂಭದಲ್ಲಿ ಇದಕ್ಕಾಗಿ ಮಹಿಳೆಯರು ಶಕ್ತಿ ಸ್ಮಾರ್ಟ್ ಕಾರ್ಡ್ ಪರಿಚಯಿಸಲಾಗುತ್ತದೆ ಎಂದು ಹೇಳಲಾಗಿತ್ತು. ಆದ್ರೇ ಈವರೆಗೆ ಅದನ್ನು ಜಾರಿಗೊಳಿಸಿಲ್ಲ.
ಇದರ ನಡುವೆ ಮಹಿಳೆಯರು ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸೋದಕ್ಕೆ ಆಧಾರ್ ಕಾರ್ಡ್, ವೋಟರ್ ಐಡಿ ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳನ್ನು ಕರ್ನಾಟಕದವರು ಅಂತ ಗುರುತಿಸಿ, ಉಚಿತ ಪ್ರಯಾಣಕ್ಕೆ ಅನುಕೂಲ ಕಲ್ಪಿಸಲು ಅವಕಾಶ ಮಾಡಿಕೊಟ್ಟಿತ್ತು. ಆದ್ರೇ ಇನ್ಮುಂದೆ ಇವು ನಡೆಯೋದಿಲ್ಲ. ರಾಜ್ಯ ಸರ್ಕಾರದಿಂದ ಶಕ್ತಿ ಸ್ಮಾರ್ಟ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ ಆದೇಶ ಕೂಡ ಮಾಡಿದೆ. ಮಹಿಳೆಯರು ಶಕ್ತಿ ಸ್ಮಾರ್ಟ್ ಕಾರ್ಡ್ ಹೊಂದಿದ್ದರೆ ಮಾತ್ರ ಅವಕಾಶ ಎಂಬುದಾಗಿ ಸುದ್ದಿ ಹರಿದಾಡುತ್ತಿತ್ತು.
ಈ ಬಗ್ಗೆ ರಾಜ್ಯ ಸರ್ಕಾರದ ಸಾರಿಗೆ ಇಲಾಖೆಯನ್ನು ನಿಮ್ಮ ಕನ್ನಡ ನ್ಯೂಸ್ ನೌ ಸಂಪರ್ಕಿಸಿ ವಿಚಾರಿಸಿತು. ಆದ್ರೇ ಈ ರೀತಿಯ ಯಾವುದೇ ಆದೇಶ ಮಾಡಲಾಗಿಲ್ಲ. ವೈರಲ್ ಆಗಿರುವಂತ ಸುದ್ದಿ ಸತ್ಯಕ್ಕೆ ದೂರವಾಗಿದೆ. ಮಹಿಳೆಯರಿಗೆ ಎಂದಿನಂತೆ ಸಾರಿಗೆ ಬಸ್ಸುಗಳಲ್ಲಿ ಆಧಾರ್ ಕಾರ್ಡ್, ವೋಟರ್ ಐಟಿ ಸೇರಿದಂತೆ ವಿವಿಧ ದಾಖಲೆಗಳನ್ನು ತೋರಿಸಿ, ಸಂಚರಿಸಬಹುದು ಎಂಬುದಾಗಿ ಸ್ಪಷ್ಟ ಪಡಿಸಿದೆ.
ವರದಿ: ವಸಂತ ಬಿ ಈಶ್ವರಗೆರೆ
BREAKING: ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅಗ್ನಿ ಅವಘಡ | Delhi BJP Office
BREAKING: ಪರಿಷತ್ ಚುನಾವಣೆ: ಬೆಂಗಳೂರಲ್ಲಿ ಜೂನ್.1ರಿಂದ 4 ಮತ್ತು 6ರಂದು ‘ಮದ್ಯ ಮಾರಾಟ’ ನಿಷೇಧ