ಬೆಂಗಳೂರು: ನಗರದ ಮಾಣಿಕ್ ಷಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಗುತ್ತದೆ. ರಾಜ್ಯಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಹಾಗಾದ್ರೇ ನೀವು ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಬಾಗಿಯಾಗಬೇಕು ಅಂದ್ರೆ ಇ-ಪಾಸ್ ಪಡೆಯಬೇಕು. ಅದು ಹೇಗೆ ಅಂತ ಮುಂದೆ ಓದಿ.
ಈ ಕುರಿತಂತೆ ಕರ್ನಾಟಕ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರದಲ್ಲಿ ದಿನಾಂಕ:15/08/2025 ರಂದು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಥಮ ಬಾರಿಗೆ E-Pass ವ್ಯವಸ್ಥೆ ಕಲ್ಪಿಸಲಾಗಿದೆ ಎಂದಿದೆ.
ಸದರಿ ಕಾರ್ಯಕ್ರಮವನ್ನು ವೀಕ್ಷಿಸಲು ಆಸಕ್ತಿ ಹೊಂದಿರುವ ಸಾರ್ವಜನಿಕರು ಸೇವಾ ಸಿಂಧು ವೆಬ್‌ಸೈಟ್ www.sevasindhu.karnataka.gov.in ನಿಂದ ಇ-ಪಾಸ್ ಅನ್ನು ಪಡೆಯಬಹುದು ಹಾಗೂ ಇ-ಪಾಸ್ ಅನ್ನು ಪಡೆಯಲು ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ಆಧಾರ್ ಕಾರ್ಡ್‌ನ ವಿವರಗಳನ್ನು ನಮೂದಿಸಿ ನೋಂದಾಯಿಸಿಕೊಳ್ಳತಕ್ಕದ್ದು ಮತ್ತು ವೆಬ್‌ಸೈಟ್‌ನಲ್ಲಿ ಲಾಗಿನ್ ಮಾಡಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿದ ನಂತರ ಬರುವ OTP ಅನ್ನು ಅಳವಡಿಸಿ E-Pass ಅನ್ನು download ಮಾಡಿಕೊಳ್ಳಬಹುದೆಂದು ಈ ಮೂಲಕ ಸಾರ್ವಜನಿಕರ ಅವಗಾಹನೆಗಾಗಿ ಪ್ರಕಟಣೆಯನ್ನು ಹೊರಡಿಸಿದೆ.
ವಿಶೇಷ ಸೂಚನೆ
> ಇ-ಪಾಸ್ ಕೇವಲ 15/08/2025 ರಂದು ಮಾನ್ಯವಾಗಿರುತ್ತದೆ.
> ಇ-ಪಾಸ್ ಹೊಂದಿರುವವರು ಬೆಳಿಗ್ಗೆ 08:15 AM ಗಿಂತ ಮೊದಲು ಗೇಟ್ ನಂ.4ರ ಬಳಿ ಆವರಣದ ಒಳಗೆ ಪ್ರವೇಶಿಸಬೇಕು. ಈ ಸಮಯದ ನಂತರ ಪ್ರವೇಶ > ಅನುಮತಿಸಲಾಗುವುದಿಲ್ಲ ಹಾಗೂ ಇ-ಪಾಸ್ ಅಮಾನ್ಯವೆಂದು ಪರಿಗಣಿಸಲಾಗುತ್ತದೆ.
> ಪ್ರತಿ ಇ-ಪಾಸ್ ಕೇವಲ ಒಬ್ಬರಿಗೆ ಮಾತ್ರ ಪ್ರವೇಶಿಸಲು ಅನುಮತಿಸಿದೆ.
> ಕಾರ್ಯಕ್ರಮದ ಸಮಯದಲ್ಲಿ ಇ-ಪಾಸ್ ಮುದ್ರಿತ ಪ್ರತಿ ಅಥವಾ ಡಿಜಿಟಲ್ (ಮೊಬೈಲ್) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು.
> 6 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಇ-ಪಾಸ್ ಅವಶ್ಯವಿರುವುದಿಲ್ಲ.
> ಇ-ಪಾಸ್ ಅನ್ನು ವರ್ಗಾಯಿಸುವಂತಿಲ್ಲ.
> ಇ-ಪಾಸ್‌ಗಳು ಒಟ್ಟು 3000 ಸಂಖ್ಯೆಗೆ ಸೀಮಿತವಾಗಿರುವುದರಿಂದ “ಮೊದಲು ಬಂದವರಿಗೆ ಮೊದಲ ಆದ್ಯತೆ” ನೀಡಲಾಗುತ್ತದೆ.
> ಮೂಲ ಗುರುತಿನ ಚೀಟಿ (Original ID card) ಕಡ್ಡಾಯವಾಗಿ ಹೊಂದಿರಬೇಕು.
> ಇ-ಪಾಸ್ ಹೊಂದಿರುವವರಿಗೆ ಪಾರ್ಕಿಂಗ್ ಸೌಲಭ್ಯ ಒದಗಿಸಲಾಗುವುದಿಲ್ಲ.
> ಪಾರ್ಕಿಂಗ್ ವ್ಯವಸ್ಥೆಗೆ ಪಾಸ್‌ಧಾರರೇ ಜವಾಬ್ದಾರರಾಗಿರುತ್ತಾರೆ ಎಂಬುದಾಗಿ ತಿಳಿಸಿದೆ.
ಶಿಸ್ತು ಕ್ರಮದಡಿ ‘ಬಿಜೆಪಿ ಹೈಕಮಾಂಡ್’ನಿಂದಲೂ ಕ್ರಮವಾಗಿದೆ: ಇಲ್ಲಿದೆ ಲೀಸ್ಟ್ ಎಂದ ಕಾಂಗ್ರೆಸ್ ವಕ್ತಾರ ಅನಿಲ್ ಕುಮಾರ್
ಸಾರ್ವಜನಿಕರೇ ಎಚ್ಚರ.! POP ಗಣೇಶ ಮೂರ್ತಿ ತಯಾರಿಕೆ, ಬಳಕೆ ಮಾಡಿದ್ರೆ 10,000 ದಂಡ, ಜೈಲು ಶಿಕ್ಷೆ ಫಿಕ್ಸ್