ಶಿವಮೊಗ್ಗದಲ್ಲಿ ವೈದ್ಯೆ, ನರ್ಸ್ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಕೆಲಸದ ವಿಚಾರವಾಗಿ ಜಗಳ ಮಾಡಿಕೊಂಡ ವೈದ್ಯೆ ಹಾಗೂ ನರ್ಸ್ ಇಬ್ಬರು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಶಿವಮೊಗ್ಗದ ಬಿಆರ್ ಪಿಯಲ್ಲಿ ನಡೆದಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಬಿಆರ್ ಪಿಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಡಾ.ಹಂಸವೇಣಿ ಹಾಗೂ ನರ್ಸ್ ಸುಕನ್ಯಾ ಎಂಬುವರು ಕೆಲಸದ ವಿಚಾರವಾಗಿ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಕೆಲಸದ ವಿಚಾರದಲ್ಲಿ ವೈದ್ಯೆ ಕಿರುಕುಳ ನೀಡುತ್ತಿದ್ದಾರೆ ಎಂಬುದಾಗಿ ಆರೋಪಿಸಿ ನಿದ್ರೆ ಮಾತ್ರೆ ಸೇವಿಸಿ ನರ್ಸ್ … Continue reading ಶಿವಮೊಗ್ಗದಲ್ಲಿ ವೈದ್ಯೆ, ನರ್ಸ್ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು