ಬೆಂಗಳೂರು: ಈಗಾಗಲೇ ಹಲವು ಸಾಧಕರಿಗೆ ಗೌರವ ಡಾಕ್ಟರೇಟ್ ( Honorary Doctorate ) ನೀಡಿರುವಂತ ಬೆಂಗಳೂರು ವಿಶ್ವವಿದ್ಯಾನಿಲಯ ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ (Sandalwood Senior Actor Dwarakish ) , ಅವರಿಗೆ ನೀಡುವುದಾಗಿ ಘೋಷಿಸಿತ್ತು.

ನಾಳೆ (ಡಿ.5) ಕನ್ನಡ ಚಿತ್ರ ರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾದ ದ್ವಾರಕೀಶ್, ಚಿತ್ರಕಲಾವಿದ ಡಾ. ಟಿ.ಅನಿಲ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ.

ನಾಳೆ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಘಟಿಕೋತ್ಸವ ಕಾರ್ಯಕ್ರಮ ಜರುಗಲಿದ್ದು, ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆಗೇರಿಸಲು ನಿರ್ಧಾರ : ಸಿಎಂ ಬೊಮ್ಮಾಯಿ

ಅಂಗನವಾಡಿ ಮಕ್ಕಳಿಗೆ ಅವಧಿ ಮೀರಿದ ಆಹಾರ : ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ

Share.
Exit mobile version