ಬೆಂಗಳೂರು : ಉಚಿತ ಚಿಕಿತ್ಸೆಗಾಗಿ ಸಾವಿರಾರು ಬಡರೋಗಿಗಳು ಬರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿಯಾಗಿರುವ ಆರೋಪ ಕೇಳಿ ಬಂದಿದೆ. ಮರ್ಮಾಂಗವನ್ನು ಕೊಯ್ದು ಸ್ಟಿಚ್ ಹಾಕದೆ ರೋಗಿಯನ್ನ ವೈದ್ಯರು (Doctor) ಮನೆಗೆ ಕಳುಹಿಸಿದ್ದು, ಮರ್ಮಾಂಗದ ಭಾದೆ ತಾಳಲಾರದೆ ರೋಗಿ ನರಳಿ ನರಳಿ ಪ್ರಾಣಬಿಟ್ಟಿದ್ದಾನೆ ಎನ್ನಲಾಗ್ತಿದೆ. ಶಾ ನವಾಜ್ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪವಿದೆ.
ಮರ್ಮಾಂಗದಲ್ಲಿ ಗಡ್ಡೆ ಬೆಳೆದ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಶಾ ನವಾಜ್ (45) ಎಂಬಾತ 10 ದಿನಗಳ ಹಿಂದೆ ಮೃತಪಟ್ಟಿದ್ದಾನೆ. ಈತ ಖಾಸಗಿ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ. ಮನೆಗೆ ಆಧಾರವಾಗಿದ್ದ ನವಾಜ್ ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.
ಕೆಲ ದಿನಗಳ ಬಳಿಕ ಪ್ಲಾಸ್ಟಿಕ್ ಸರ್ಜರಿ ವಿಭಾಗಕ್ಕೆ ಹೋಗುವಂತೆ ಸಿಬ್ಬಂದಿ ಹೇಳಿದ್ದರಂತೆ. ಆದರೆ ಗಾಯ ಇನ್ನೂ ಆರಿಲ್ಲ ಅಂತ ಸರ್ಜರಿ ವಿಭಾಗ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದರು. ಅಪರೇಷನ್ ಹಾಗೂ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಸಿಬ್ಬಂದಿ ಸಮನ್ವಯತೆ ಕೊರತೆ ಕಾರಣ ರೋಗಿ ಗಂಭೀರ ಸ್ಥಿತಿಯಲ್ಲಿ ಇರುವಾಗಲೇ ಡಿಸ್ಚಾರ್ಜ್ ಆಗುವಂತೆ ಒತ್ತಡ ಹೇರಲಾಗಿದೆ. ಕೊನೆಗೆ ಕೊಯ್ದಿದ್ದ ಮರ್ಮಾಂಗಕ್ಕೆ ಹೊಲಿಗೆ ಕೂಡ ಮಾಡದೇ ಸಿಬ್ಬಂದಿಯೇ ರೋಗಿಯನ್ನ ಕಳುಹಿಸಿರುವ ಆರೋಪ ಕೇಳಿಬಂದಿದೆ.
ಕೊನೆಗೆ ಆಕೆಯ ಪತ್ನಿ 3 ದಿನ ಫುಟ್ ಪಾತ್ ನಲ್ಲೇ ರೋಗಿಯನ್ನು ಇಟ್ಟುಕೊಂಡಿದ್ದರಂತೆ. ಎಷ್ಟೇ ಅಂಗಲಾಚಿದರೂ ಆಸ್ಪತ್ರೆ ಸಿಬ್ಬಂದಿ ಮತ್ತೆ ಅಡ್ಮಿಟ್ ಮಾಡಿಕೊಂಡಿಲ್ಲ. ಮರ್ಮಾಂಗದಲ್ಲಿ ರಕ್ತ ಸುರಿಯುತ್ತಲೇ ಇದ್ದರೂ ಸ್ಟೆಚಿಂಗ್ ಕೂಡ ಮಾಡದೇ ನಿರ್ಲಕ್ಷ್ಯ ತೋರಿದ್ದಾರೆ. ಇದೀಗ ನವಾಜ್ ಕುಟುಂಬಸ್ಥರು ಆಸ್ಪತ್ರೆ ವೈದ್ಯರ ಹಾಗು ಸಿಬ್ಬಂದಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.








