ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಆಗಿದ್ದ ಸಿಜೆ ರಾಯ್ ಅವರು ನಿನ್ನೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಮರಣೋತ್ತರ ಪರೀಕ್ಷೆ ವೇಳೆ ವೈದ್ಯರು ಎದೆಯಲ್ಲಿದ್ದ ಒಂದು ಗುಂಡು ಹೊರತೆಗೆದಿದ್ದಾರೆ.
ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ರಾಯ್ ಅವರ ಮರಣೋತ್ತರ ಪರೀಕ್ಷೆ ನಡೆದಿದ್ದು ಎದೆಗೆ ಹೊಕ್ಕಿದ್ದ ಒಂದು ಗುಂಡನ್ನು ವೈದ್ಯರು ಇದೀಗ ಹೊರಗಡೆ ತೆಗೆದಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಇದೀಗ ಅಂತ್ಯವಾಗಿದೆ. ಕೆಲವೇ ಕ್ಷಣಗಳಲ್ಲಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ.
ಇನ್ನು ಬಾಬು ಒಡೆತನದ ವೈಟ್ ಹೌಸ್ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಕೋರಮಂಗಲದಲ್ಲಿರುವ ವೈಟ್ ಹೌಸ್ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು ಕಾಸಾಗ್ರಾಂಡ್ ನಲ್ಲಿ ಸಿಜೆ ರಾಯ್ ಅಂತ್ಯಕ್ರಿಯೆ ನೆರವೇರಲಿದೆ ಸಾಧ್ಯತೆ ಎನ್ನಲಾಗಿದೆ ಎಂದು ಸಂಜೆ ಅಥವಾ ನಾಳೆ ಸಿರಿಯರ ಅಂತ್ಯಕ್ರಿಯೆ ನೆರವೇರಲಿದೆ.








