ವಸತಿ ಸಚಿವರ ರಾಜಿನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ?: HDK ಪ್ರಶ್ನೆ

ನವದೆಹಲಿ: ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ; ರಾಜ್ಯ ಕಾಂಗ್ರೆಸ್‌ ಸರಕಾರದ ದರ್ಬಾರಿನಲ್ಲಿ ಶಾಸಕರ ಪರಿಸ್ಥಿತಿ ತಬರನ ಕಥೆಯಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿಯ ತಮ್ಮ ಅಧಿಕೃತ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಶಾಸಕರು ಅನುದಾನಕ್ಕಾಗಿ, ಸರಕಾರದ ಯೋಜನೆಗಳಿಗಾಗಿ ಕಚೇರಿಗಳ ಸುತ್ತ, ಮಂತ್ರಿಮಹೋದಯರ ಸುತ್ತ ತಬರನಂತೆ ಸುತ್ತುತ್ತಿದ್ದಾರೆ. ಆಡಳಿತ ಪಕ್ಷದ ಸದಸ್ಯರಿಗೇ ಇಂಥ ದುರ್ಗತಿ ಬಂದರೆ ಇತರೆ ಪಕ್ಷಗಳ ಶಾಸಕರ ಪರಿಸ್ಥಿತಿ ಏನು? ಎಂದು ಪ್ರಶ್ನಿಸಿದರು. … Continue reading ವಸತಿ ಸಚಿವರ ರಾಜಿನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ?: HDK ಪ್ರಶ್ನೆ