ಮಾರಕ ಕೊರೊನಾ ವೈರಸ್ ಗೆ ಈ ವರ್ಷಾಂತ್ಯಕ್ಕೆ ಲಸಿಕೆ ಲಭ್ಯ : ಡೊನಾಲ್ಡ್ ಟ್ರಂಪ್ ವಿಶ್ವಾಸ | Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada languageWorld

ಮಾರಕ ಕೊರೊನಾ ವೈರಸ್ ಗೆ ಈ ವರ್ಷಾಂತ್ಯಕ್ಕೆ ಲಸಿಕೆ ಲಭ್ಯ : ಡೊನಾಲ್ಡ್ ಟ್ರಂಪ್ ವಿಶ್ವಾಸ

ವಾಷಿಂಗ್ಟನ್ : ಮಾರಕ ಕೊರೊನಾ ವೈರಸ್ ಗೆ ಈ ವರ್ಷಾಂತ್ಯಕ್ಕೆ ಲಸಿಕೆ ಲಭ್ಯವಾಗಲಿದೆ ಎಂದು ಡೊನಾಲ್ಡ್ ಟ್ರಂಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೊರೊನಾಗೆ ಲಸಿಕೆ ಕಂಡುಹಿಡಿಯುವ ನಿಟ್ಟಿನಲ್ಲಿ ಪ್ರಯೋಗಗಳು ನಡೆದಿದ್ದು, ಈ ವರ್ಷಾಂತ್ಯಕ್ಕೆ ಲಸಿಕೆ ಲಭ್ಯವಾಗುವ ಸಾಧ್ಯತೆ ಇದೆ ಎಂದು ಟ್ರಂಪ್ ತಿಳಿಸಿದ್ದಾರೆ.

ಈ ಕುರಿತಂತೆ ವೈಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಕೊರೊನಾಗೆ ಲಸಿಕೆ ಕಂಡುಹಿಡಿಯುವ ಪ್ರಯತ್ನದಲ್ಲಿ ವಿಜ್ಞಾನಿಗಳು ಹರಸಾಹಸ ನಡೆಸಿದ್ದು, ಪ್ರಯತ್ನ ಬಹುತೇಕ ಯಶಸ್ವಿಯಾಗುವ ಹಂತದಲ್ಲಿದೆ. ಹೀಗಾಗಿ ಈ ವರ್ಷಾಂತ್ಯಕ್ಕೆ ಲಸಿಕೆ ಲಭ್ಯವಾಗುವ ನಿರೀಕ್ಷೆಯಿದೆ ಎಂದರು.

ಇನ್ನು ಕೊರೊನಾ ವೈರಸ್ ನ ಉಗಮ ಸ್ಥಾನ ವುಹಾನ್ ನ ವನ್ಯಜೀವಿ ಮಾಂಸ ಮಾರುಕಟ್ಟೆ ಅಲ್ಲ. ಬದಲಾಗಿ ಅದೇ ವುಹಾನ್ ನ ವೈರಾಣು ಲ್ಯಾಬ್ ಎಂಬ ಡೊನಾಲಡ್ ಟ್ರಂಪ್ ಅವರ ವಾದವನ್ನು ಅಮೆರಿಕಾದ ಕಾರ್ಯದರ್ಶಿ ಮೈಕ್ ಪಾಂಪಿಯೊ ಪುನರುಚ್ಚರಿಸಿದ್ದಾರೆ. ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್ ಚೀನಾದ ವುಹಾನ್ ಪ್ರಯೋಗಾಲಯದಿಂದ ಬಂದಿದ್ದೆಂದು ಹೇಳಲು ನಮ್ಮ ಬಳಿ ಸಾಕಷ್ಟು ಪುರಾವೆಗಳಿವೆ. ಆದರೆ, ವೈರಸ್ ನ್ನು ಜೈವಿಕವಾಗಿ ಮಾರ್ಪಾಡುಗೊಳಿಸಿರುವ ಬಗ್ಗೆ ಸಾಕ್ಷ್ಯಗಳಿಲ್ಲ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಪ್ರಾಣಿಯನ್ನು ಪ್ರಯೋಗಾಲಯದಲ್ಲಿ ನಾಶ ಮಾಡಲಾಗಿದೆ. ಈ ವೇಳೆ ಆಕಸ್ಮಿಕವಾಗಿ ಹಲವರಿಗೆ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊರೊನಾ ವೈರಸ್ ಹುಟ್ಟಿನ ಬಗ್ಗೆ ಹಲವು ಸಿದ್ದಾಂತಗಳು ವ್ಯಕ್ತವಾಗಿದ್ದು, ಈ ಪೈಕಿ ಇದು ಒಂದಾಗಿದೆ ಎಂದು ಸ್ಥಳೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮೈಕ್ ಪಾಂಪಿಯೊ ತಿಳಿಸಿದ್ದಾರೆ…error: ಕದಿಯೋದು ಬಿಟ್ಟು ಸ್ವಂತವಾಗಿ ಬರೆಯೋದು ಕಲಿಯಿರಿ