Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

BREAKING: ಪಿಎಂ ಮೋದಿ ಕುರಿತು ದಾರಿ ತಪ್ಪಿಸುವ ಎಕ್ಸ್ ಪೋಸ್ಟ್: ಮಧು ಕಿಶ್ವರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್!

Too much sex: ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ? ತಜ್ಞರ ಮಾಹಿತಿ ಇಲ್ಲಿದೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ಧರಾಮಯ್ಯ
KARNATAKA

ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ಧರಾಮಯ್ಯ

By ವಸಂತ ಬಿ ಈಶ್ವರಗೆರೆ

ತುಮಕೂರು : ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು.

ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂಥಾ ಕತೆಗಳನ್ನು ಕಟ್ಟಿ ಬಿಡ್ತಾರೆ ಹುಷಾರು ಎಂದು ಎಚ್ಚರಿಸಿದರು.

ಬಸವಣ್ಣ 850 ವರ್ಷಗಳ ಹಿಂದೆಯೇ ಅನುಭವ ಮಂಟಪ ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು. ಪ್ರಗತಿಪರ ವಿಚಾರಗಳನ್ನು ಇಟ್ಟುಕೊಂಡವರಿಗೆ ನಿರಂತರವಾಗಿ ಸಮಸ್ಯೆ ಬರುತ್ತಲೇ ಇರುತ್ತವೆ. ಹೀಗಾಗಿ ಪ್ರಗತಿಪರ ವಿಚಾರಗಳ ಜೊತೆ ನೀವು ಸದಾ ಗಟ್ಟಿಯಾಗಿ ನಿಲ್ಲಬೇಕು. ಪ್ರಗತಿಪರ ವಿಚಾರಗಳ ಜೊತೆಗೆ ನಾವು ನಿಲ್ಲದೆ ಸಮ ಸಮಾಜ ಬರಬೇಕು ಎಂದರೆ ಸಾಧ್ಯವಿಲ್ಲ ಎಂದು ವಿವರಿಸಿದರು.

ಮುಖ್ಯಮಂತ್ರಿಗಳ ಭಾಷಣದ ಇತರೆ ಹೈಲೈಟ್ಸ್…

*ಜಾತಿಗೆ ಚಲನ ಇಲ್ಲ. ವರ್ಗಕ್ಕೆ ಚಲನೆ ಇಲ್ಲ. ಜಾತಿ ವ್ಯವಸ್ಥೆ ನಿಂತ ನೀರು. ಚಲನೆ ಇಲ್ಲ. ಆರ್ಥಿಕ ಚಲನೆ ಸಿಕ್ಕಾಗ ಮಾತ್ರ ಜಾತಿಯಲ್ಲೂ ಚಲನೆ ಸಿಗುತ್ತದೆ. ಈ ಚಲನೆ ಸಿಗಬೇಕಾದರೆ ಶಿಕ್ಷಣದ ಅಗತ್ಯ ಇದೆ ಎಂದರು.

*ಜಾತಿ ಮುಕ್ತ ಮಾನವೀಯ ಸಮಾಜ ನಿರ್ಮಾಣ ನಮ್ಮ ಸಂವಿಧಾನದ ಆಶಯ ಮತ್ತು ಬದ್ಧತೆ. ಆದರೆ ಇವತ್ತಿಗೂ ಅಸ್ಪೃಶ್ಯತೆ ಹೋಗಿಲ್ಲದಿರುವುದು, ಶೈಕ್ಷಣಿಕ ಸಮಾನತೆ ಇಲ್ಲದಿರುವುದು ಬೇಸರದ ಸಂಗತಿ.

*ನಾನು ಶಿಕ್ಷಣ ಪಡೆದಿರುವುದು ನನ್ನ ಸ್ವಾರ್ಥಕ್ಕೆ ಅಲ್ಲ. ಅವಕಾಶ ವಂಚಿತ ಸಮುದಾಯಗಳ ಬಿಡುಗಡೆಗಾಗಿ ವಿದ್ಯೆ ಸಂಪಾದನೆ ಮಾಡಿದ್ದೇನೆ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಅರ್ಥ ಮಾಡಿಕೊಳ್ಳಬೇಕು.

*ಸಂವಿಧಾನ ಬರದೇ ಇದ್ದರೆ ನಾವು, ನೀವು ಶಿಕ್ಷಣ ಪಡೆಯಲು ಸಾಧ್ಯವಿರಲಿಲ್ಲ.

ಮನುಸ್ಮೃತಿ ಕಾರಣದಿಂದ ಜಾತಿ ಅಸಮಾನತೆ, ಜಾತಿ ಶೋಷಣೆ, ಜಾತಿ ದೌರ್ಜನ್ಯ ಹೆಚ್ಚಾಯಿತು

*ಪಟ್ಟಭದ್ರರು ಹಿಂದಿನ ಜನ್ಮದ ಕರ್ಮ ಎಂದು ನಂಬಿಸಿ ಜನರನ್ನು ವಂಚಿಸುತ್ತಿದ್ದಾರೆ. ಅದಕ್ಕೇ ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದರು. ನಿಮ್ಮಲ್ಲಿ ಎಷ್ಟು ಜನ ಕರ್ಮ ಸಿದ್ಧಾಂತ ತಿರಸ್ಕರಿಸಿದ್ದೀರೋ ಗೊತ್ತಿಲ್ಲ.

*ಬ್ರಹ್ಮ ಒಬ್ಬರಿಗೆ ಶಿಕ್ಷಣ, ಮತ್ತೊಬ್ಬರಿಗೆ ಅನಕ್ಷರತೆ ಸಿಗಲಿ ಅಂತ ಬರೆದರಾ? ಒಬ್ಬನಿಗೆ ಬಡವನಾಗು, ಮತ್ತೊಬ್ಬನಿಗೆ ಶ್ರೀಮಂತನಾಗು ಅಂತ ಬ್ರಹ್ಮ ಬರೆದರಾ ? ಒಬ್ಬ ಹೊಟ್ಟೆತುಂಬ ಉಣ್ಣಬೇಕು, ಉಳಿದವರು ಹಸಿವಿನಿಂದ ಬಿದ್ದಿರಬೇಕು ಎಂದು ಬ್ರಹ್ಮ ಬರೆದುಬಿಟ್ಟರಾ ಎಂದು ಪ್ರಶ್ನಿಸಿದರು.

ಪಟ್ಟಭದ್ರರು ಬಸವಣ್ಣನವರ ಕ್ರಾಂತಿ ಮುಂದುವರೆಸಲು ಬಿಡಲಿಲ್ಲ. ಆದ್ದರಿಂದ ನಾವು ವೈಜ್ಞಾನಿಕವಾಗಿ, ವೈಚಾರಿಕವಾಗಿ ಚಿಂತಿಸುವುದು ಅಗತ್ಯ

*ಅಹಿಂದ ಸಮಾಜ ಮತ್ತು ಎಲ್ಲಾ ಜಾತಿ, ಧರ್ಮಗಳ ಬಡತನ, ಹಸಿವು ನಿವಾರಣೆ ಆಗಬೇಕು. ಅನ್ನಕ್ಕಾಗಿ ಯಾರೂ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿ ನಿಲ್ಲಬಾರದು ಎನ್ನುವ ಕಾರಣದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ ಎಂದು ಸ್ಮರಿಸಿದರು.

*ಕಾಯಕ, ದಾಸೋಹ ಬಸವಣ್ಣನವರ ತತ್ವ. ಇದನ್ನು ಎಲ್ಲರೂ ಪಾಲಿಸಬೇಕು ಎಂದರು.

*ಎಲ್ಲಾ ಶ್ರಮಿಕ ವರ್ಗಗಳ ಸಂಸ್ಕೃತಿ, ಆಚಾರ, ವಿಚಾರ ಹೊರಗೆ ಬರಬೇಕು. ಇದಕ್ಕಾಗಿ ಎಲ್ಲರೂ ಸಾಹಿತ್ಯ ರಚನೆಯಲ್ಲಿ ತೊಡಗೇಕು ಎಂದರು.

*ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ನಿಗಧಿಯಾಗಿತ್ತು. ಆದರೆ ಈಗ ಶಿಕ್ಷಣ ಸಿಕ್ಕಿದೆ. ನಿಮ್ಮ ನಿಮ್ಮ‌ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ. ನಮ್ಮ ಜ್ಞಾನ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು ಎಂದರು.

Fact Check: ‘ಪಿಎಂ ಮೋದಿ ಎಸಿ ಯೋಜನೆ’ ಜಾರಿ, ‘ಉಚಿತ AC’ ವಿತರಣೆ? ಇಲ್ಲಿದೆ ಅಸಲಿ ಸತ್ಯ | Free 5-star AC offer

SHOCKING : ಪತ್ನಿಯ ಪ್ರಿಯಕರನ ‘ಜನನಾಂಗ’ ಕತ್ತರಿಸಿ ಠಾಣೆಗೆ ತಂದ ಪತಿ : ಬೆಚ್ಚಿಬಿದ್ದ ಪೊಲೀಸ್ ಅಧಿಕಾರಿಗಳು!

Share. Facebook Twitter LinkedIn WhatsApp Email

Related Posts

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

3 Mins Read

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

2 Mins Read

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

1 Min Read
Recent News

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

BREAKING: ಪಿಎಂ ಮೋದಿ ಕುರಿತು ದಾರಿ ತಪ್ಪಿಸುವ ಎಕ್ಸ್ ಪೋಸ್ಟ್: ಮಧು ಕಿಶ್ವರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್!

Too much sex: ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ? ತಜ್ಞರ ಮಾಹಿತಿ ಇಲ್ಲಿದೆ

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

State News
KARNATAKA

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಶನಿ ದೋಷವನ್ನು ಅನುಭವಿಸುತ್ತಿರುವ ಮೇಷ, ಸಿಂಹ, ಕನ್ಯಾ, ಧನುಸ್ಸು, ಕುಂಭ ಹಾಗೂ ಮೀನ ರಾಶಿಯವರಿಗೆ ಶನಿ ದೋಷದಿಂದ ವಿಮುಕ್ತಿ ದೊರಕುವ…

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.