ವಿಜಯಪುರ : ಸಂವಿಧಾನ ತಿದ್ದುಪಡಿ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿರುವ ಉತ್ತರಕನ್ನಡ ಕ್ಷೇತ್ರದ ಸಂಸದ ಅನಂತ್ ಕುಮಾರ ಹೆಗ್ಡೆಗೆ ಈ ಬಾರಿ ಲೋಕಸಭಾ ಟಿಕೇಟ್ ನೀಡುವುದು ಬೇಡ ಎಂದು ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ ಅವರು ಪಕ್ಷದ ವರಿಷ್ಠರಿಗೆ ಒತ್ತಾಯಿಸಿದರು.
ಲೋಕಸಭಾ ಚುನಾವಣೆ 2024: ನೀವು ತಿಳಿಯಲೇಬೇಕಾದ ‘ಕರ್ನಾಟಕ ಕ್ಷೇತ್ರ’ಗಳ ಅಂಕಿಅಂಶ ಇಲ್ಲಿದೆ
ವಿಜಯಪುರದಲ್ಲಿ ಸುದೀಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಂತಕುಮಾರ ಹೆಗಡೆ ಈ ಹಿಂದೆಯೂ ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ್ದರು. ಆಗ ಪ್ರಧಾನಿ ನರೇಂದ್ರ ಮೋದಿ ಅವರು ಹೆಗಡೆಯವರನ್ನು ಕರೆಯಿಸಿ ಕ್ಷಮೆ ಕೇಳಿಸಿದ್ದರು. ಸಚಿವ ಸ್ಥಾನದಿಂದಲೂ ತೆಗೆದುಹಾಕಿದ್ದರು. ಅದಾದ ಬಳಿಕ ಅವರು ಸಾರ್ವಜನಿಕವಾಗಿ ಎಲ್ಲಿಯೂ ಕಾಣಸಿಕೊಂಡಿರಲಿಲ್ಲ. ಇದೀಗ ಚುನಾವಣೆ ಹತ್ತಿರ ಬಂದಾಗ ಬಂದಿದ್ದಾರೆ. ಬಹುಶಃ ಅವರ ತಲೆ ಕೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಬಿಜೆಪಿ ಸಂವಿಧಾನ ಬದ್ಧವಾಗಿ ಆಡಳಿತ ನಡೆಸುತ್ತಿದೆ. ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಬಾರದೆಂಬುದು ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯವಾಗಿತ್ತು. ಆದರೂ ಸಂವಿಧಾನಕ್ಕೆ ವಿರೋಧಿವಾಗಿ ನೀಡಲಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಅದನ್ನು ರದ್ದುಗೊಳಿಸಿ ಸಂವಿಧಾನದ ಆಶಯ ಈಡೇರಿಸಿತು. ಹೀಗಾಗಿ ಸಂವಿಧಾನ ಬದ್ಧವಾಗಿ ಬಿಜೆಪಿ ಆಡಳಿತ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಶಯವೂ ಅದೇ ಆಗಿದೆ. ಅಸ್ಪೃಶ್ಯತೆ ನಿವಾರಣೆಯಾಗಬೇಕು, ಸಮಾನತೆ ತರಬೇಕೆಂಬುದು ಮೋದಿ ಆಶಯ ಎಂದು ಸಮರ್ಥಿಸಿಕೊಂಡರು.
ಸಂವಿಧಾನ ತಿದ್ದುಪಡಿ ಮಾಡಲು 400ಕ್ಕೂ ಅಧಿಕ ಸ್ಥಾನ ಬೇಕು’ ಎಂದು ಹೆಗಡೆ ಹೇಳುತ್ತಾರೆ. ಸದ್ಯ ಇರುವ ಸ್ಥಾನಗಳೇ ತಿದ್ದುಪಡಿ ಮಾಡಲು ಸಾಕು. ಸಂವಿಧಾನ ಈಗಾಗಲೇ ಸಾಕಷ್ಟು ಬಾರಿ ತಿದ್ದುಪಡಿಯಾಗಿದೆ. ಕಾಂಗ್ರೆಸ್ 95ಕ್ಕೂ ಅಧಿಕ ಬಾರಿ ಸಂವಿಧಾನ ತಿದ್ದುಪಡಿ ಮಾಡಿದೆ. ಆಗೆಲ್ಲ ಕಾಂಗ್ರೆಸ್‌ನವರು ಏಕೆ ಸುಮ್ಮನಿದ್ದರು? ಎಂದು ಪ್ರಶ್ನಿಸಿದರು