ಮೂಡಿಗೆರೆ : ಮೂಡಿಗೆರೆಯಲ್ಲಿ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ ಸ್ವಪಕ್ಷೀಯ ಕಾರ್ಯಕರ್ತರೇ ತಿರುಗಿ ಬಿದ್ದಿದ್ದು, ಈ ಬಾರಿ ಟಿಕೆಟ್ ನೀಡಬೇಡಿ ಎಂದು ಪಟ್ಟುಹಿಡಿದು ಕುಳಿತಿದ್ದಾರೆ.
ಹೌದು, ಬಿಜೆಪಿ ಕಾರ್ಯಕರ್ತರು ಮೂಡಿಗೆರೆಯಿಂದ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ಪಟ್ಟುಹಿಡಿದು ಕುಳಿತಿದ್ದಾರೆ. ಇತ್ತೀಚೆಗೆ ಯಡಿಯೂರಪ್ಪ, ಸಿಟಿ ರವಿ ಕಾರಿಗೆ ಮುತ್ತಿಗೆ ಹಾಕಿದ್ದ ಬಿಜೆಪಿ ಕಾರ್ಯಕರ್ತರು ಇದೀಗ ಚಿಕ್ಕಮಗಳೂರಿನ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಸಿ.ಟಿ.ರವಿ ಮನೆಗೆ ಭೇಟಿ ನೀಡಿದ ಸಾವಿರಾರು ಕಾರ್ಯಕರ್ತರು, ಎಂ.ಪಿ.ಕುಮಾರಸ್ವಾಮಿಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ಆಗ್ರಹಿಸಿದರು.
ಮೂಡಿಗೆರೆಯಲ್ಲಿ ಕಳೆದ ವಾರ ತಮ್ಮ ಕಾರ್ಯಕರ್ತರು ರಸ್ತೆ ಮಧ್ಯೆಯೇ ಅಡ್ಡ ಹಾಕಿ ಪ್ರತಿಭಟನೆ ನಡೆಸಿದ ಕಾರಣ ಬಿ.ಎಸ್. ಯಡಿಯೂರಪ್ಪ ಕೋಪಗೊಂಡು ರೋಡ್ ಶೋ ರದ್ದು ಮಾಡಿ ಹೆಲಿಪ್ಯಾಡ್ನತ್ತ ತೆರಳಿದ್ದರು. ಇದೀಗ ಚಿಕ್ಕಮಗಳೂರಿನ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಸಿ.ಟಿ.ರವಿ ಮನೆಗೆ ಭೇಟಿ ನೀಡಿದ ಸಾವಿರಾರು ಕಾರ್ಯಕರ್ತರು, ಎಂ.ಪಿ.ಕುಮಾರಸ್ವಾಮಿಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ಆಗ್ರಹಿಸಿದರು.
ಅರಶಿನ ಬೆಳೆಗಾರ’ರಿಗೆ ಯುಗಾದಿ ಗಿಫ್ಟ್: ಕೇಂದ್ರ ಸರ್ಕಾರದಿಂದ ‘ಪ್ರತಿ ಕ್ವಿಂಟಲ್ ಗೆ 6,694 ರೂ ಬೆಂಬಲ ಬೆಲೆ’ ಘೋಷಣೆ
ಬೆಂಗಳೂರು: ರಾಜ್ಯದ ಅರಶಿನ ಬೆಳೆ ಖರೀದಿಗೆ ಸೂಚಿಸಿ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಿದ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರಸಿಂಗ್ ತೋಮರ್ ಅವರಿಗೆ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಜೀಯವರಿಗೆ ಅನಂತ ಧನ್ಯವಾದಗಳನ್ನು ತಿಳಿಸುವುದಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ತಿಳಿಸಿದ್ದಾರೆ.
ಮಾರುಕಟ್ಟೆಯಲ್ಲಿ ಅರಶಿನ ಬೆಳೆಯ ದರ ಕುಸಿತದ ಕಾರಣ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿಯಲ್ಲಿ ಅರಶಿನ ಬೆಳೆಯನ್ನು ಖರೀದಿಸಬೇಕೆಂದು ರಾಜ್ಯದ ಅರಶಿನ ಬೆಳೆಗಾರರ ನಿಯೋಗ ಕಳೆದ ವಾರವಷ್ಟೇ ನನಗೆ ಮನವಿ ಸಲ್ಲಿಸಿತ್ತು. ಅಲ್ಲದೆಮ ಅರಶಿನ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಬೇಕೆಂದು ಮನವಿ ಮಾಡಿತ್ತು ಎಂದು ಅವರು ತಿಳಿಸಿದ್ದಾರೆ.ಕರ್ನಾಟಕದ ಬಿಜೆಪಿ ರಾಜ್ಯ ಸರ್ಕಾರವು ಸಹ ಕೇಂದ್ರ ಸರ್ಕಾರಕ್ಕೆ ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಮನವಿಗೆ ಸ್ಪಂದಿಸಿ ನಾನು ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಆದೇಶಿಸಿದ್ದೆ. ಶೀಘ್ರವಾಗಿ ಕೇಂದ್ರದಿಂದ ಆದೇಶ ಹೊರಡಿಸಿ, ಅರಿಸಿಣ ಬೆಳೆಯ ರೈತರ ಕಷ್ಟಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರ ಒದಗಿಸಲಾಗಿದೆ ಎಂದು ಅವರು ಮೆಚ್ಚುಗೆ ಸೂಚಿಸಿದ್ದಾರೆ.
‘ಅರಶಿನ ಬೆಳೆಗಾರ’ರಿಗೆ ಯುಗಾದಿ ಗಿಫ್ಟ್: ಕೇಂದ್ರ ಸರ್ಕಾರದಿಂದ ‘ಪ್ರತಿ ಕ್ವಿಂಟಲ್ ಗೆ 6,694 ರೂ ಬೆಂಬಲ ಬೆಲೆ’ ಘೋಷಣೆ